ಬಿಬಿಎಂಪಿ ಕಚೇರಿಗಳ ಮೇಲೆ ಮುಂದುವರಿದ ಎಸಿಬಿ ದಾಳಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಿಗೆಳೆಯಲು ಬುಧವಾರವೂ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಿಬಿಎಂಪಿಯ ಹಲವು ಕಚೇರಿಗಳಿಗೆ ಮೇಲೆ ದಾಳಿ ಮುಂದುವರೆಸಿದ್ದಾರೆ.

ಕೇಂದ್ರ ಕಚೇರಿ ಸೇರಿ ಇತರ ವಿಭಾಗಗಳಲ್ಲಿ ಎಸಿಬಿ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಯಲಹಂಕ, ಬೊಮ್ಮನಹಳ್ಳಿ, ಮಹದೇವಪುರ ಸೇರಿದಂತೆ ಎಂಟು ವಲಯಗಳಲ್ಲೂ ಎಸಿಬಿಯ 10 ತಂಡಗಳು ದಾಇ ನಡೆಸಿದ್ದು, ಕಂದಾಯ, ಇಂಜಿನಿಯರಿಂಗ್, ಟಿಡಿಆರ್ ವಿಭಾಗಕ್ಕೆ‌ ಸೇರಿದ ಆಕ್ರಮ ಕಡತಗಳ ಹುಡುಕಾಟ ನಡೆಸಿವೆ.
ಬಿಬಿಎಂಪಿ ಕೇಂದ್ರ ಕಚೇರಿ, ವಲಯ ಕಚೇರಿಗಳ ಮೇಲೆ ಎಸಿಬಿ ಕಳೆದ ಶುಕ್ರವಾರ ದಾಳಿ ಮಾಡಿತ್ತು. ಭ್ರಷ್ಟಾಚಾರ ನಿಗ್ರಹ ದಳದ 200ಕ್ಕೂ ಹೆಚ್ಚು ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈಗ ಫೀಲ್ಡ್ ವಿಸಿಟ್ ಮೂಲಕ ಭ್ರಷ್ಟಾಚಾರದ ಬಗ್ಗೆ ಮಾಹಿತಿ ಕಲೆ ಹಾಕಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಬಹು ರಾಷ್ಟ್ರೀಯ ಕಂಪನಿಗಳ ತೆರಿಗೆ ವಂಚನೆ, ಒಂದೇ ಕಾಮಗಾರಿ ಹೆಸರಿನಲ್ಲಿ ಹಲವಾರು ಬಿಲ್‌ ಮಂಜೂರಾತಿ, ಕಾಮಗಾರಿ ಮಾಡದೆ ಬಿಲ್‌ ಜಾರಿ ಮಾಡಿರುವುದು ದಾಳಿ ವೇಳೆ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ಮುಂದುವರಿಸಲಾಗಿದೆ.

ಪ್ರಮುಖ ಸುದ್ದಿ :-   ಕೆಪಿಎಸ್‌ಸಿ ಹಗರಣ; ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸರ್ಕಾರದ ಅನುಮತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement