ಈವರೆಗೆ ಉಕ್ರೇನ್‌ನಲ್ಲಿ ಸಿಲುಕಿದ್ದ ಕರ್ನಾಟಕದ 86 ಮಂದಿ ವಾಪಸ್

ಬೆಂಗಳೂರು: ಉಕ್ರೇನ್‌ನಲ್ಲಿ ಸಿಲುಕಿದ್ದ ಕರ್ನಾಟಕದ 694 ವಿದ್ಯಾರ್ಥಿಗಳ ಪೈಕಿ 86 ಮಂದಿ ಇದುವರೆಗೂ ವಾಪಸ್ ಆಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್‌ ಅಧಿಕಾರಿ ಮನೋಜ್‌ ರಂಜನ್‌ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಕರ್ನಾಟಕದ 694 ಜನರು ಉಕ್ರೇನ್‌ನಲ್ಲಿ ಸಿಲುಕಿದ್ದು, ಫೆಬ್ರವರಿ 27 ರಿಂದ ಬುಧವಾರದ ತನಕ 86 ಜನರು ರಾಜ್ಯಕ್ಕೆ ವಾಪಸ್ ಆಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಉಕ್ರೇನ್‌ನಲ್ಲಿರುವ ವಿದ್ಯಾರ್ಥಿಗಳ ಕುಟುಂಬಸ್ಥರನ್ನು ಸರ್ಕಾರದ ಅಧಿಕಾರಿಗಳು ಭೇಟಿ ಮಾಡಿ ಧೈರ್ಯ ತುಂಬುತ್ತಿದ್ದು, 314 ಜನರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. 425 ಪೋಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಲಾಗಿದೆ ಎಂದು ತಿಳಿಸಿದ್ದಾರೆ.

ಯಾವ ಯಾವ ಜಿಲ್ಲೆಗಳ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಕಳುಹಿಸಿಕೊಡಲಾಗಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡ ಪೋಷಕರನ್ನು ಭೇಟಿ ಮಾಡಿ ರಕ್ಷಣಾ ಕಾರ್ಯಾಚರಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement