ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 382 ಕೊರೊನಾ ಸೋಂಕು ದಾಖಲು, 10 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಗುರುವಾರ ಹೊಸದಾಗಿ 382 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇವೇಳೆ 689 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಇಂದು, ಗುರುವಾರ ಕೊರೊನಾ ಸೋಂಕಿನಿಂದ 10 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ರಾಜ್ಯದಲ್ಲಿ 3,890 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಗುರುವಾರ ಒಂದೇ ದಿನ 239 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ 2,630 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಸೋಂಕಿನ ವಿವರ..
ಬಾಗಲಕೋಟೆ 0, ಬಳ್ಳಾರಿ 14, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 239, ಬೀದರ್ 2, ಚಾಮರಾಜನಗರ 6, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 3, ಚಿತ್ರದುರ್ಗ 6, ದಕ್ಷಿಣ ಕನ್ನಡ 6, ದಾವಣಗೆರೆ 0, ಧಾರವಾಡ 11, ಗದಗ 1, ಹಾಸನ 5, ಹಾವೇರಿ 0, ಕಲಬುರಗಿ 6, ಕೊಡಗು 16, ಕೋಲಾರ 3, ಕೊಪ್ಪಳ 1, ಮಂಡ್ಯ 0, ಮೈಸೂರು 15, ರಾಯಚೂರು 0, ರಾಮನಗರ 0, ಶಿವಮೊಗ್ಗ 10, ತುಮಕೂರು 12, ಉಡುಪಿ 7, ಉತ್ತರ ಕನ್ನಡ 7, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement