ಕರ್ನಾಟಕ ಬಜೆಟ್‌-2022-23: ಕೃಷಿ ವಲಯಕ್ಕೆ 33,700 ಕೋಟಿ ರೂ. ಅನುದಾನ, ರಿಯಾಯ್ತಿ ಬಡ್ಡಿಯಲ್ಲಿ 33 ಲಕ್ಷ ರೈತರಿಗೆ ಸಾಲ ಸೌಲಭ್ಯ

ಬೆಂಗಳೂರು: ಪ್ರಸಕ್ತ ರಾಜ್ಯ ಬಜೆಟ್​ನಲ್ಲಿ ಕೃಷಿ ವಲಯಕ್ಕೆ 33,700 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ‘ರೈತಶಕ್ತಿ’ ಎಂಬ ಹೊಸ ಯೋಜನೆ ಘೋಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರೈತರ ಸಮಗ್ರ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದರು.
33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ ವಿಸ್ತರಣೆ, ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ ಪ್ರಸ್ತಾಪ, ರೈತ ಶಕ್ತಿ ಯೋಜನೆಗೆ 500 ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ. ರೈತರ ಆರೋಗ್ಯ ಸೇವೆಗಾಗಿ ಯಶಸ್ವಿನಿ ಯೋಜನೆ ಪರಿಷ್ಕರಣೆ, ಉತ್ತ,, ವೈದ್ಯಕೀಯ ಸೌಲಭ್ಯ ಕಲ್ಪಿಸಲು 300 ಕೋಟಿ ಅನುದಾನ
ಕೃಷಿ ಜಮೀನು ಸರ್ವೇಗೆ ಡ್ರೋನ್ ಬಳಕೆ, ಜಮೀನು ಸರ್ವೆಗೆ 287 ಕೋಟಿ ಅನುದಾನ ಹಾಗೂ ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ ನೀಡಲಾಗಿದೆ.

ಕೃಷಿ ವಲಯಕ್ಕೆ ಏನೇನು ನೀಡಲಾಗಿದೆ..?

*ರೈತ ಶಕ್ತಿ ನೂತನ ಯೋಜನೆಯಡಿ ಕೃಷಿ ಯಂತ್ರೋಪಕರಣಗಳ ಬಳಕೆ ಉತ್ತೇಜನಕ್ಕೆ ಪ್ರತಿ ಎಕರೆಗೆ 250 ರೂ. ಗಳಂತೆ ಡೀಸೆಲ್ ಸಹಾಯಧನ. ಇದಕ್ಕಾಗಿ 600 ಕೋಟಿ ರೂ. ಅನುದಾನ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮಿನಿ ಆಹಾರ ಪಾರ್ಕ್ ಸ್ಥಾಪನೆ.
ಕೆಪೆಕ್ ಮೂಲಕ ಕೃಷಿ ಉತ್ಪನ್ನಗಳ ಕೊಯ್ಲಿನೋತ್ತರ ನಿರ್ವಹಣೆ, ಮಾರಾಟ ಮತ್ತು ರಫ್ತಿಗೆ 50 ಕೋಟಿ ರೂ. ಹಂಚಿಕೆ,
ದ್ರಾಕ್ಷಿ ಬೆಳೆಯ ಸಂಗ್ರಹಣೆ, ಸಂಸ್ಕರಣೆ ಮತ್ತು ಸಾಗಾಣಿಕೆಗೆ ವಿಜಯಪುರ ಜಿಲ್ಲೆ ತೊರವಿಯಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಶೈತ್ಯ ಸಂಗ್ರಹಾಗಾರ ಸ್ಥಾಪನೆ, ಶೀತಲೀಕೃತ ಸರಕು ಸಾಗಣೆ ವಾಹನ ಪೂರೈಕೆ.
ಬಡ್ಡಿ ರಿಯಾಯಿತಿ ಯೋಜನೆಯಡಿ 3 ಲಕ್ಷ ಹೊಸ ರೈತರು ಸೇರಿದಂತೆ ಒಟ್ಟು 33 ಲಕ್ಷ ರೈತರಿಗೆ 24,000 ಕೋಟಿ ಸಾಲ ವಿತರಣೆ ಗುರಿ.
ಕೃಷಿ ಉತ್ಪಾದನೆ ಹೆಚ್ಚಳ ಹಾಗೂ ರೈತರ ಕ್ಷೇಮಾಭಿವೃದ್ಧಿಗೂ ಯೋಜನೆ ಜಾರಿ
ಗ್ರಾಮೀಣ ರೈತರಿಗೆ ಆರೋಗ್ಯ ಸೇವೆಗೆ ಪರಿಷ್ಕೃತ ರೂಪದಲ್ಲಿ ಯಶಸ್ವಿನಿ ಯೋಜನೆ ಮರು ಜಾರಿ. ಈ ಸಂಬಂಧ ಸರ್ಕಾರದಿಂದ 300 ಕೋಟಿ ರೂ. ಅನುದಾನ.
57 ತಾಲೂಕುಗಳಲ್ಲಿ 642 ಕೋಟಿ ರೂ. ವೆಚ್ಚದಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ
ಬಳ್ಳಾರಿ ಜಿಲ್ಲೆಯ ಹಗರಿ ಹಾಗೂ ಬೆಳಗಾವಿ ಜಿಲ್ಲೆ, ಅಥಣಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆ.

ಓದಿರಿ :-   ದೆಹಲಿ: ಶಾಸ್ತ್ರಿ ಭವನದ 7ನೇ ಮಹಡಿಯಿಂದ ಜಿಗಿದು ಐಟಿ ಸಚಿವಾಲಯದ ವಿಜ್ಞಾನಿ ಸಾವು

 

ಹೈನುಗಾರಿಕೆಗೆ ಉತ್ತೇಜನ

ನೂತನ 100 ಪಶುಚಿಕಿತ್ಸಾಲಯಗಳ ಪ್ರಾರಂಭ
ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯಕ್ಕೆ ರಾಜ್ಯದಲ್ಲಿ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ, ರಾಜ್ಯ ಸರ್ಕಾರದಿಂದ 100 ಕೋಟಿ ರೂ. ಷೇರು ಬಂಡವಾಳ,
ಗೋಶಾಲೆಗಳ ಸಂಖ್ಯೆ 100ಕ್ಕೆ ಹೆಚ್ಚಳ, 50 ಕೋಟಿ ರೂ. ಅನುದಾನ. ಗೋಶಾಲೆಗಳಲ್ಲಿನ ಗೋವುಗಳ ದತ್ತು ಪ್ರೋತ್ಸಾಹಕ್ಕೆ ರಾಜ್ಯದಲ್ಲಿ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ.
ಹಾವೇರಿಯಲ್ಲಿ ಮೆಗಾ ಡೈರಿ ಸ್ಥಾಪನೆ; ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ.
ಆಕಸ್ಮಿಕ ಮರಣ ಹೊಂದುವ ಕುರಿ/ ಮೇಕೆ ಸಾಕಾಣಿಕೆದಾರರು/ ವಲಸೆ ಕುರಿಗಾರರ ಕುಟುಂಬಕ್ಕೆ 5 ಲಕ್ಷ ರೂ.ಗಳ ವರೆಗೆ ವಿಮಾ ಸೌಲಭ್ಯ
ಆಳ ಸಮುದ್ರ ಮೀನುಗಾರಿಕೆ ಉತ್ತೇಜನಕ್ಕೆ ಪ್ರಧಾನ ಮಂತ್ರಿ ಮತ್ಸ ಸಂಪದ ಸಂಯೋಜನೆಯೊಂದಿಗೆ 100 ಆಳ ಸಮುದ್ರ ಮೀನುಗಾರಿಕಾ ಹಡಗುಗಳಿಗೆ ನೆರವು ನೀಡಲು ‘ಮತ್ಸಸಿರಿ’ ಯೋಜನೆ ಜಾರಿ.

ರೇಷ್ಮೆ ಬೆಳೆಗಾರರಿಗೆ ಪ್ರೋತ್ಸಾಹ

ಸರ್ಕಾರಿ ರೇಷ್ಮೆ ಗೂಡು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಪ್ರತಿ ಟನ್ ದ್ವಿತಳಿ ರೇಷ್ಮೆಗೂಡಿಗೆ 10 ಸಾವಿರ ರೂ. ಪ್ರೋತ್ಸಾಹ ಧನ.
ದ್ವಿತಳಿ ಬಿತ್ತನೆ ಗೂಡಿಗೆ ಪ್ರತಿ ಕೆಜಿಗೆ 50 ರೂ. ಪ್ರೋತ್ಸಾಹಧನ ಹೆಚ್ಚಳ. ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಪ್ರೋತ್ಸಾಹಧನ.
ದ್ವಿತಳಿ ಮೊಟ್ಟೆ ಉತ್ಪಾದಿಸಿ ಶೈತೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಶೈತ್ಯಾಗಾರ
ಕಲಬುರಗಿ ಮತ್ತು ಹಾವೇರಿ ಜಿಲ್ಲೆಯಲ್ಲಿ 30 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಸರ್ಕಾರಿ ರೇಷ್ಮೆ ಗೂಡು ಮಾರ್ಕೆಟ್‌ ನಿರ್ಮಾಣ
ಮಂಡ್ಯ ಜಿಲ್ಲೆ, ಕೆ.ಆರ್. ಪೇಟೆಯಲ್ಲಿ ರೇಷ್ಮೆ ತರಬೇತಿ ಕೇಂದ್ರ

ಓದಿರಿ :-   ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯಕುಮಾರ ಸಕ್ಸೇನಾ ನೇಮಕ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ