ಕರ್ನಾಟಕ ಬಜೆಟ್‌-2022-23: ಬಿಬಿಎಂಪಿ ಚುನಾವಣೆಯತ್ತ ದೃಷ್ಟಿ: ಬೆಂಗಳೂರಿಗೆ ಭರಪೂರ ಕೊಡುಗೆ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿಗೆ ಬಜೆಟ್‌ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರು ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಅಲ್ಲದೆ, ಬೆಂಗಳೂರಿನಲ್ಲಿ ಮೆಗಾ ಜ್ಯುವೆಲರಿ ಪಾರ್ಕ್‌ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ ರೂ. ಮೀಸಲಿಡಲಾಗಿದ್ದು, ನಮ್ಮ ಮೆಟ್ರೋ, ಸಬ್‌ ಅರ್ಬನ್‌ ರೈಲು, ಪೆರಿಫೆರಲ್‌ ರಿಂಗ್‌ ರೋಡ್‌ ಸೇರಿದಂತೆ ವಿವಿಧ ಯೋಜನೆಗಳಿಗೆ ಭರಪೂರ ಅನುದಾನ ನೀಡಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ ಮೆಗಾ ಜ್ಯುವೆಲರಿ ಪಾರ್ಕ್‌ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದು, 10 ಸಾವಿರ ಜನರಿಗೆ ಉದ್ಯೋಗವಕಾಶ ಸೃಷ್ಟಿಯಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

2022-23 ನೇ ಸಾಲಿನಲ್ಲಿ 33 ಕಿಮೀ ಮೆಟ್ರೋ ಮಾರ್ಗ ಸೇರಿಸಲಾಗುವುದು. ಸೆಂಟ್ರಲ್ ಸಿಲ್ಕ್ ಬೋರ್ಡ್‌ನಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ 58.19 ಕಿ.ಮೀ ಮೆಟ್ರೋ ಕಾಮಗಾರಿ ಆರಂಭವಾಗಿದ್ದು 2025 ರೊಳಗೆ ಪೂರ್ಣಗೊಳ್ಳಲಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಮೆಟ್ರೋ ಮೂರನೇ ಹಂತದ ಯೋಜನೆಯನ್ನು 11,250 ಕೋಟಿ ರೂ.ಗಳ ವೆಚ್ಚದಲ್ಲಿ ಕೇಂದ್ರದ ಅನುಮೋದನೆಗೆ ಕಳುಹಿಸಲಾಗುತ್ತದೆ. ಹೆಬ್ಬಾಳದಿಂದ – ಜೆ‌ಪಿ ನಗರದವರೆಗೆ 32 ಕಿಮೀ ರಿಂಗ್ ರಸ್ತೆ ಮಾರ್ಗ ಹಾಗೂ ಹೊಸಹಳ್ಳಿಯಿಂದ-ಕಡಬಗೆರೆಗೆ 13 ಕಿಮೀ ಮಾರ್ಗ ನಿರ್ಮಿಸಲಾಗುತ್ತದೆ. 2022-23ನೇ ಸಾಲಿನಲ್ಲಿ 15 ಸಾವಿರ ಕೋಟಿ ವೆಚ್ಚದಲ್ಲಿ 37 ಕಿಮೀ ಉದ್ದದ ಸರ್ಜಾಪುರ, ಅಗರ, ಕೋರಮಂಗಲ, ಡೈರಿ ವೃತ್ತದ ಮೂಲಕ ಹೆಬ್ಬಾಳದವರೆಗೆ ಹೊಸ ಮಾರ್ಗಕ್ಕೆ ಡಿಪಿಆರ್ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಬೆಂಗಳೂರು ಮೂಲಭೂತ ಸೌಕರ್ಯಕ್ಕೆ 6 ಸಾವಿರ ಕೋಟಿ ರೂ.ಗಳ ವೆಚ್ಚದಲ್ಲಿ ಅಮೃತ ನಗರೋತ್ಥಾನದಡಿ ರಸ್ತೆ ಅಭಿವೃದ್ಧಿ, ಗ್ರೇಡ್ ಸೆಪರೇಟರ್, ಕೆರೆ, ನೀರುಗಾಲುವೆ, ಪಾರ್ಕ್, ತ್ಯಾಜ್ಯ ನಿರ್ವಹಣೆ, ಸ್ಲಂ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಓದಿರಿ :-   ತನಿಖೆ ನಂತರ ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್‌ ರಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಅಲ್ಲದೆ, ವೈಟ್ ಫೀಲ್ಡ್, ಕೆ.ಆರ್ ಪುರಂ, ಯಶವಂತಪುರ, ಜ್ಞಾನಭಾರತಿ, ಯಲಹಂಕ ನಿಲ್ದಾಣಗಳಲ್ಲಿ 55 ಕೋಟಿ ರೂ. ವೆಚ್ಚದಲ್ಲಿ ರೈಲ್ವೆಯೊಂದಿಗೆ ಮೆಟ್ರೋ ನಿಲ್ದಾಣದ ಸಂಪರ್ಕದ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ.
73 ಕಿಮೀ ಉದ್ದದ ಫೆರಿಫೆರಲ್ ರಿಂಗ್ ರಸ್ತೆಗೆ ಭೂಸ್ವಾಧೀನ ವೆಚ್ಚ ಸೇರಿ 21,091 ಕೋಟಿ ರೂ. ಈಗಾಗಲೇ ಅನುಮೋದನೆಯಾಗಿದ್ದುDBFOT ಮಾದರಿಯಲ್ಕಿ ಗುತ್ತಿಗೆದಾರರೇ ಭೂಸ್ವಾಧೀನ ಮತ್ತು ನಿರ್ಮಾಣ ವೆಚ್ಚ ಭರಿಸುವುದರೊಂದಿಗೆ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಲಾಗುವುದು. ಹಾಗೂ ಬನಶಂಕರಿ ಜಂಕ್ಷನ್ ನಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ಸ್ಕೈವಾಕ್ (ಪಾದಚಾರಿ-ರಸ್ತೆಬದಿ ವ್ಯಾಪಾರಿಗಳ ಸುರಕ್ಷತೆ ಹಾಗೂ ಮೆಟ್ರೋ ನಿಲ್ದಾಣವನ್ನು- ಬಸ್ ನಿಲ್ದಾಣದೊಂದಿಗೆ ಸಂಪರ್ಕಿಸಲು) ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗೊರಗುಂಟೆಪಾಳ್ಯ ಗ್ರೇಡ್ ಸಪರೇಟರ್ ಮೇಲ್ಸೇತುವೆ ನಿರ್ಮಾಣಕ್ಕೆ ಬಿಬಿಎಂಪಿ, ಬಿಡಿಎ ಜಂಟಿ ಕಾಮಗಾರಿ, ಬಿಡಿಎ – ಕೆಂಪೇಗೌಡ ಬಡಾವಣೆಗೆ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿ ಮಾಡಲಾಗುವುದು. ಅಲ್ಲದೆ, ಸರ್‌ಎಂ ವಿಶ್ವೇಶ್ವರಯ್ಯ ಬಡಾವಣೆ ಬನಶಂಕರಿ 6ನೇ ಹಂತ ಅಂಜನಾಪುರ ಬಡಾವಣೆಯಕ್ಕಿ ರಸ್ತೆ, ಚರಂಡಿ ಕಾಮಗಾರಿಗೆ 404 ಕೋಟಿ ರೂ. ವೆಚ್ಚದಲ್ಲಿ ಬಿಡಿಎಯಿಂದ ನಿರ್ಮಾಣ ನಂತರ ಪಾಲಿಕೆಗೆ ಹಸ್ತಾಂತರ ಮಾಡಲಾಗುವುದು ಎಂದು ಹೇಳಿದರು.

ಓದಿರಿ :-   ಜೂನ್ 21ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ