ಬೊಮ್ಮಾಯಿ ಬಜೆಟ್: ಅಭಿವೃದ್ಧಿಗೆ ಪಂಚಸೂತ್ರ ಅಳವಡಿಕೆ, ಯಾವ ಇಲಾಖೆಗೆ ಎಷ್ಟು ಹಣ ಕೊಡಲಾಗಿದೆ..?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು, ಶುಕ್ರವಾರ ತಮ್ಮ ಚೊಚ್ಚಲ ಬಜೆಟ್ ಮಾಡಿದ್ದು, ಬಜೆಟ್‌ ಗಾತ್ರ 2,53,165 ಕೋಟಿ ರೂ.ಗಳಾಗಿವೆ. ಕಳೆದ ಬಜೆಟ್‌ ಗಾತ್ರಕ್ಕೆ ಹೋಲಿಸಿದರೆ ಈ ಸಲ ಬಜೆಟ್‌ ಶೇ7.70% ಹೆಚ್ಚಳವಾಗಿದೆ.
ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ಪ್ರಸ್ತಾಪಿಸಿರುವ ಬೊಮ್ಮಾಯಿ, ಮಹಿಳೆಯರಿಗಾಗಿ ಪ್ರತ್ಯೇಕ ಬಜೆಟ್, ಮಕ್ಕಳಿಗಾಗಿ ಪುಟಾಣಿ ಬಜೆಟ್‌ ಮಂಡನೆ ಮಾಡಲಾಗುತ್ತದೆ ಎಂದರು.
ಯಾವ ಇಲಾಖೆಗೆ ಎಷ್ಟು?

ಕೃಷಿ ಮತ್ತು ಪೂರಕ ಚಟುವಟಿಕೆಗಳು: 33,700 ಕೋಟಿ ರೂ.
ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ: 68,479 ಕೋಟಿ ರೂ.
ಆರ್ಥಿಕ ಅಭಿವೃದ್ಧಿಗೆ ಉತ್ತೇಜನ: 55,657 ಕೋಟಿ ರೂ.
ಬೆಂಗಳೂರು ಸಮಗ್ರ ಅಭಿವೃದ್ಧಿಗೆ: 8,409 ಕೋಟಿ ರೂ.
ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗೆ: 3102 ಕೋಟಿ ರೂ.
ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆ: 56,710 ಕೋಟಿ ರೂ.
ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ.
ಮಕ್ಕಳ ಆಯವ್ಯಯಕ್ಕೆ ಅನುದಾನ 40,944 ಕೋಟಿ ರೂ.
ಎಸ್ಸಿಎಸ್ಪಿ/ಟಿಎಸ್ಪಿಗೆ 28,234 ಕೋಟಿ ರೂ.
ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಇತರ ಜನಕಲ್ಯಾಣ ಕಾರ್ಯಕ್ರಮಗಳಿಗೆ 6,329 ಕೋಟಿ ರೂ. ಹೆಚ್ಚುವರಿ ಅನುದಾನ

 

ಉಳಿದಂತೆ ರಾಜ್ಯದ ಕೆರೆಗಳ ಅಭಿವೃದ್ಧಿಗೆ 500 ಕೋಟಿ, ತಾಲೂಕುಗಳ ಅಭಿವೃದ್ದಿಗೆ 3 ಸಾವಿರ ಕೋಟಿ ರೂಪಾಯಿ ಹಾಗೂ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ 8409 ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿದೆ.
ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಅನುದಾನ ನೀಡಲಾಗಿದ್ದು, 15,267 ಕೋಟಿ ವೆಚ್ಚದಲ್ಲಿ ಉಪನಗರ ರೈಲ್ವೆ ಯೋಜನೆ
2026ರ ವೇಳೆಗೆ 148 ಕಿ.ಮೀ. ಮಾರ್ಗ ಪೂರ್ಣ ಭರವಸೆ ನೀಡಿದ್ದಾರೆ. ಬೆಂಗಳೂರಿನ ಎಲ್ಲಾ ವಾರ್ಡ್ ಗಳಲ್ಲಿ ನಮ್ಮ ಕ್ಲಿನಿಕ್ ನಿರ್ಮಾಣ. ಬೆಂಗಳೂರಿನ ನಾಲ್ಕು ಭಾಗಗಳಲ್ಲೂ 500  ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ,
ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ವಲಯದಲ್ಲಿರುವ ಆರು ಲಕ್ಷಕ್ಕೂ ಹೆಚ್ಚು ಸ್ವತ್ತುಗಳು ಎ ವಹಿಗೆ ದಾಖಲಿಸಲು ಕ್ರಮ
ಎನ್ ಜಿಇಎಫ್ ನ 105 ಎಕರೆಯಲ್ಲಿ ಸಿಂಗಾಪುರ್ ಮಾದರಿಯಲ್ಲಿ ಗ್ರೀನ್ ಎಕ್ಸ್ ಪೋ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಆಹಾರ ಇಲಾಖೆ – 2,288 ಕೋಟಿ ರೂ.ಗಳ ಅನುದಾನ, ವಸತಿ ಇಲಾಖೆ – 3,594 ಕೋಟಿ ರೂ. ಅನುದಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 4,713 ಕೋಟಿ ರೂ. ಅನುದಾನ ಕೃಷಿ ಮತ್ತು ತೋಟಗಾರಿಕೆ ಇಲಾಖೆ – 8,457 ಕೋಟಿ ರೂ ಅನುದಾನ, ಕೃಷಿ ಜಮೀನು ಡ್ರೋನ್ ಸರ್ವೆಗೆ ₹287 ಕೋಟಿ ಅನುದಾನ ಘೋಷಣೆ, ನೋಂದಣಿ ಕಚೇರಿಗಳ ಉನ್ನತೀಕರಣಕ್ಕೆ ₹406 ಕೋಟಿ,
1

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

0 ಮಹಾನಗರ ಪಾಲಿಕೆ ವ್ಯಾಪ್ತಿಯ ದಾಖಲೆ ಸ್ಕ್ಯಾನಿಂಗ್​ಗಾಗಿ 15 ಕೋಟಿ ರೂಪಾಯಿ ಮೀಸಲು. ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗಲಗಳ ಸ್ವಾಯತ್ತತೆ ಹಾಗೂ ದೇಗುಲಗಳ ಅಭಿವೃದ್ಧಿಗೆ 168 ಕೋಟಿ ರೂಪಾಯಿ ಘೋಷಣೆ ಮಾಡಿದ ಸಿಎಂ.ಸಮಾಜ ಕಲ್ಯಾಣ ಇಲಾಖೆ – 9,389 ಕೋಟಿ ರೂ ಅನುದಾನ, ಲೋಕೋಪಯೋಗಿ ಇಲಾಖೆ – 10,447 ಕೋಟಿ ರೂ ಅನುದಾನ, ಸಾರಿಗೆ ಇಲಾಖೆ – 11,222 ಕೋಟಿ ರೂ ಅನುದಾನ, ಜಲ ಸಂಪನ್ಮೂಲ ಇಲಾಖೆ – 20,601 ಕೋಟಿ ರೂ ಅನುದಾನ, ಶಿಕ್ಷಣ ಇಲಾಖೆ – 31,980 ಕೋಟಿ ರೂಪಾಯಿ ಅನುದಾನ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ – 17,325 ಕೋಟಿ ರೂಪಾಯಿ, ನಗರಾಭಿವೃದ್ಧಿ ಇಲಾಖೆ – 16,076 ಕೋಟಿ ರೂಪಾಯಿ ಅನುದಾನ. ಕಂದಾಯ ಇಲಾಖೆ – 16,388 ಕೋಟಿ ರೂಪಾಯಿ ಅನುದಾನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – 13,982 ಕೋಟಿ ರೂಪಾಯಿ ಅನುದಾನ, ಇಂಧನ ಇಲಾಖೆ – 12,655 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದರು.
ಕಟ್ಟಡ ಕಾರ್ಮಿಕರ ಶ್ರೇಯೋಭಿವೃದ್ಧಿಗೆ 2100 ಕೋಟಿ ಮೀಸಲು, ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ, ಕಟ್ಟಡ ಕಾರ್ಮಿಕರಿಗಾಗಿ ರಿಯಾಯಿತಿ ಬಸ್ ಪಾಸ್ ಯೋಜನೆ, ಹುಬ್ಬಳ್ಳಿ ಮತ್ತು ದಾವಣಗೆರೆ ಇಎಸ್‌ಐ ಆಸ್ಪತ್ರೆಗಳ ಬೆಡ್ 100ಕ್ಕೆ ಹೆಚ್ಚಳ ಯೆಲ್ಲೊ ಬೋರ್ಡ್‌ ಡ್ರೈವರ್ ಮಕ್ಕಳಿಗಾಗಿ ವಿದ್ಯಾನಿಧಿ ಸ್ಕೀಮ್ ಹಾಗೂ ಡ್ರೈವರ್ಸ್‌ ಮಕ್ಕಳ ಆರೋಗ್ಯ ಸೌಲಭ್ಯಕ್ಕೂ ವಿಶೇಷ ಯೋಜನೆ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement