ಕರ್ನಾಟಕ ಬಜೆಟ್‌-2022- ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಬಿಸಿಯೂಟ ತಯಾರಿಕರ ಗೌರವ ಧನ ಹೆಚ್ಚಳ, ಹಾಲು ಉತ್ಪಾದಕರಿಗೆ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್‌ನಲ್ಲಿ ಅಂಗನವಾಡಿ, ಬಿಸಿಯೂಟ ತಯಾರಕರು ಹಾಗೂ ಆಶಾ ಕಾರ್ಯಕರ್ತೆಯರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿಹಿ ಸುದ್ದಿ ನೀಡಿದ್ದು, ಅವರ ಗೌರವಧನವನ್ನು ಹೆಚ್ಚಳ ಮಾಡುವುದಾಗಿ ಪ್ರಕಟಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತರಿಗೆ ಅವರ ಸೇವೆಗಳ ಅನುಭವದ ಆಧಾರದ ಮೇಲೆ 1000-1500 ರೂ.ಗಳ ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಪ್ರವಾಸಿ ಗೈಡ್‌ಗಳಿಗೆ ಮಾಸಿಕ 2000 ಪ್ರೋತ್ಸಾಹ ಗೌರವ ಧನ ಎಂದು ಘೋಷಿಸಿದ್ದಾರೆ.

ಆಶಾ ಕಾರ್ಯಕರ್ತರು, ಗ್ರಾಮ ಸಹಾಯಕರಿಗೆ 1000 ರೂ.ಗಳು, ಬಿಸಿಯೂಟ ತಯಾರಿಕರಿಗೂ ತಲಾ 1000 ರೂ.ಗಳಂತೆ ಗೌರವ ಧನ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ.
ರಾಜ್ಯದ ಗ್ರಾಮ ಸಹಾಯಕರಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು1,000 ರೂ.ಗಳಷ್ಟು ಹೆಚ್ಚಳ ಮಾಡಲಾಗುತ್ತದೆ.
ರಾಜ್ಯದ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸಲಾಗುತ್ತದೆ, ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ನಮ್ಮ ಸರ್ಕಾರವು ಹಾಲು ಉತ್ಪಾದಕರಿಗೆ ಸರಳ ನಿಬಂಧನೆಗಳೊಂದಿಗೆ ಸಾಲ ಸೌಲಭ್ಯ ನೀಡಲು, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಪ್ರಜ್ವಲ್‌ ರೇವಣ್ಣ ಪ್ರಕರಣ : ದೇವೇಗೌಡ, ಎಚ್‌ಡಿಕೆಯನ್ನು ತಪ್ಪಾಗಿ ಬಿಂಬಿಸಿ ಸುದ್ದಿ ಪ್ರಸಾರ ಮಾಡದಂತೆ 89 ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ

ಈ ಬ್ಯಾಂಕಿಗೆ ಹಾಲು ಉತ್ಪಾದಕರ ಸಹಕಾರ ಸಂಘ, ಕರ್ನಾಟಕ ಹಾಲು ಮಹಾಮಂಡಳ ಹಾಗೂ ಜಿಲ್ಲಾ ಹಾಲು ಒಕ್ಕೂಟಗಳು ಒಟ್ಟಾರೆ 260 ಕೋಟಿ ರೂ ಮತ್ತು ರಾಜ್ಯ ಸರ್ಕಾರವು 100 ಕೋಟಿ ರೂ ಗಳ ಷೇರು ಬಂಡವಾಳವನ್ನು ಒದಗಿಸಲಿದೆ ಎಂದು ತಿಳಿಸಿದರು.

 

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement