ಕರ್ನಾಟಕ ಬಜೆಟ್‌-2022 -ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಹಣ, ಪ್ರಮುಖ ನೀರಾವರಿ ಯೋಜನೆಗಳಿಗೆ ಭರಪೂರ ಅನುದಾನ

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ ಮಂಡನೆ ಮಾಡಿದ್ದು,
ರಾಜ್ಯದಲ್ಲಿ ಬಹಳ ಸುದ್ದಿಯಲ್ಲಿರುವ ಮೇಕೆದಾಟು ಯೋಜನೆಗೆ ರಾಜ್ಯ ಬಜೆಟ್​ನಲ್ಲಿ ಒಂದು ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ.

ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಮಂಡನೆಯಾಗಿದೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಶೇ. 7.7 ಹೆಚ್ಚಳವಾಗಿದ್ದು, ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ – ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮ. ಹಿಂದುಳಿದ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮ, ಕೃಷಿ, ಕೈಗಾರಿಕೆ ಹಾಗೂ ಸೇವಾ ವಲಯ – ಪಾಲುದಾರಿಕೆಯೊಂದಿಗೆ ಅಭಿವೃದ್ಧಿ, ನವಭಾರತಕ್ಕಾಗಿ ನವ ಕರ್ನಾಟಕ – ಹೊಸ ಚಿಂತನೆ, ಹೊಸ ಚೈತನ್ಯದ ಜತ ಹೊಸ ಮುನ್ನೋಟಕ್ಕೆ ಒತ್ತು ನೀಡಲಾಗಿದೆ.

ರಾಜ್ಯ ಸರ್ಕಾರವೂ ಮೇಕೆದಾಟು ಯೋಜನೆಗೆ ಸಾವಿರ ಕೋಟಿ ಹಣವನ್ನು ಬಜೆಟ್‌ನಲ್ಲಿ ಮೀಸಲಿಡುವುದಾಗಿ ಘೋಷಿಸಿದೆ. ಇದರ ಜತೆಗೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಭರಪೂರ ಅನುದಾನ ಹಂಚಿಕೆ ಮಾಡಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ 5 ಸಾವಿರ ಕೋಟಿ ರೂ.ಗಳು, ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗೆ 1 ಸಾವಿರ ಕೋಟಿ ರೂ.ಗಳು, ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ರೂ.ಗಳು ಹಾಗೂ ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ ರೂ.ಗಳ ಅನುದಾನವನ್ನು ಬೊಮ್ಮಾಯಿ ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದಲ್ಲಿ ತಾಪಮಾನ ಏರಿಕೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಈ ಬಾರಿ ಸಿಎಂ 2,53,165 ಕೋಟಿ ರೂ.ಗಳ ಬಜೆಟ್​ ಮಂಡಿಸಿದ ಬೊಮ್ಮಾಯಿ, ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳನ್ನು ಬಜೆಟ್‌ನಲ್ಲಿ ಅಳವಡಿಕೆ ಮಾಡಿದ್ದಾರೆ, ಕೃಷಿಗೆ 33,700 ಕೋಟಿ ರೂ.ಗಳು, ಬೆಂಗಳೂರು ಅಭಿವೃದ್ಧಿಗೆ 8,409 ಕೋಟಿ ರೂ.ಗಳು, ಸಂಸ್ಕೃತಿ, ಪರಂಪರೆ ಸಂರಕ್ಷಣೆಗೆ 3,102 ಕೋಟಿ ಅನುದಾನ ಘೋಷಿಸಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement