ಕರ್ನಾಟಕ ಬಜೆಟ್‌ 2022 -23: ಈ ಬಾರಿ ಯಾವುದೇ ತೆರಿಗೆಯಲ್ಲಿ ಹೆಚ್ಚಳವಿಲ್ಲ-ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕ ರೋಗದ ಕಾರಣ ಆರ್ಥಿಕ ಬೆಳವಣಿಗೆ ಕುಂಠೀತವಾದ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳದ ಹೆಚ್ಚಳವಾಗಬಹುದು ಎಂಬ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್ ನೀಡಿದ್ದು, ಈ ಬಾರಿ ಯಾವುದೇ ತೆರಿಗೆ ಹೆಚ್ಚಳವಿಲ್ಲ ಎಂದು ಘೋಷಣೆ ಮಾಡಿದ್ದಾರೆ.

ಕರ್ನಾಟಕ ಬಜೆಟ್ 2022-23 ಮಂಡಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ತೆರಿಗೆ ಹೆಚ್ಚಳ ಮಾಡುವುದಿಲ್ಲ ಎಂದು ಪ್ರಕಟಿಸಿದರು. ಸಾರಿಗೆ ಇಲಾಖೆಗೆ 8,007 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿ, ಅಬಕಾರಿ ಇಲಾಖೆಗೆ 29,000 ಕೋಟಿ ರೂ.ಗಳ ರಾಜಸ್ವ ಸಂಗ್ರಹ ಗುರಿ, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 15,000 ಕೋಟಿ ರೂ, ವಾಣಿಜ್ಯ ತೆರಿಗೆ ಇಲಾಖೆಗೆ 77,010 ಕೋಟಿ ರೂ.ಗಳ ತೆರಿಗೆ ಸಂಗ್ರಹ ಗುರಿ ನಿಗದಿ ಪಡಿಸಲಾಗಿದೆ.

ಅಲ್ಲದೆ,ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಇಂಧನಗಳ ಮೇಲೆ ಯಾವುದೇ ತೆರಿಗೆ ಇಲ್ಲ. ರಾಜಸ್ವ ಕೊರತೆ ಅಂದಾಜು 14,699 ಕೋಟಿ ರೂ.ಗಳು ಹಾಗೂ ವಿತ್ತೀಯ ಕೊರತೆ ಅಂದಾಜು 61,564 ಕೋಟಿ ರೂ.ಗಳಾಗಿವೆ ಎಂದು ತಿಳಿಸಿದರು.

 

ಪ್ರಮುಖ ಸುದ್ದಿ :-   ಶಿಂಧೆ ಬಣದ ಶಿವಸೇನೆ ಸೇರಿದ ಬಾಲಿವುಡ್‌ ನಟ ಗೋವಿಂದ : 14 ವರ್ಷಗಳ ವನವಾಸದ ನಂತರ ರಾಜಕೀಯಕ್ಕೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement