ಕರ್ನಾಟಕ ಬಜೆಟ್‌-2022-23: ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ.ಗಳ ಸಹಾಯಧನ

ಬೆಂಗಳೂರು: ಈ ಬಾರಿಯ ಬಜೆಟ್​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುಣ್ಯಕ್ಷೇತ್ರಗಳಿಗೆ ಹೋಗುವವರಿಗೆ ಬಂಪರ್​ ಕೊಡುಗೆ ನೀಡಿದ್ದಾರೆ.
30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ ನೀಡುವುದಾಗಿ ಅವರು ಅವರು ಪ್ರಕಟಿಸಿದ್ದಾರೆ.
ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಕೊಲ್ಲೂರು, ತಿರುಪತಿ, ಮಂತ್ರಾಲಯ, ಮೇಲ್ ಮರವತ್ತೂರು ಕ್ಷೇತ್ರಗಳಿಗೆ ಪ್ಯಾಕೇಜ್ ಟೂರ್‌ ಘೋಷಣೆ ಮಾಡಿದ್ದಾರೆ.

30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5000 ರೂ ಸಹಾಯಧನ . ಪುಣ್ಯ ಕ್ಷೇತ್ರಗಳಿಗೆ ಕೆಎಸ್​ಟಿಡಿಸಿ ವತಿಯಿಂದ ಪ್ರವಾಸಕ್ಕೆ ವ್ಯವಸ್ಥೆ ಮಾಡಲಾಗುವುದು. ಶ್ರೀ ಶೈಲದಲ್ಲಿ 85 ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಬೇಲೂರು, ಹಳೆಬೀಡು, ಸೋಮನಾಥಪುರ ಸೇರಿ ಹೊಯ್ಸಳರ‌ ಸ್ಮಾರಕ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೆ ಕ್ರಮ ಕೈಗೊಳ್ಳಾಗುವುದು, ಹಂಪಿ-ಬದಾಮಿ, ಐಹೊಳೆ- ಪಟ್ಟದಕಲ್ಲು-ವಿಜಯಪುರ ಪ್ರವಾಸಿ ವೃತ್ತ, ಮೈಸೂರು-ಶ್ರೀರಂಗಪಟ್ಟಣ-ಹಾಸನ-ಬೇಲೂರು- -ಹಳೆಬೀಡು ಪ್ರವಾಸಿ ವೃತ್ತ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.

ಪರ್ವತಮಾಲಾ ಯೋಜನೆಯಡಿ ಚಾಮುಂಡಿ ಬೆಟ್ಟ ಮತ್ತು ದತ್ತಪೀಠದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ, ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ರೂ.ಗಳನ್ನು ಮೀಸಲಾಗಿಡುವುದು. ನಂದಿ ಬೆಟ್ಟದಲ್ಲಿ 93 ಕೋಟಿ ವೆಚ್ಚದಲ್ಲಿ ರೋಪ್ ವೇ, ಯಾಣದಲ್ಲಿ ರೋಪ್ ವೇ ನಿರ್ಮಾಣಕ್ಕೆ ಕ್ರಮ ಜೋಗದಲ್ಲಿ 116ಕೋಟಿ ವೆಚ್ಚದಲ್ಲಿ ಹೋಟೆಲ್ ಮತ್ತು ರೋಪ್ ವೇ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement