ಕರ್ನಾಟಕ ಬಜೆಟ್‌ 2022-23: ಕರಾವಳಿ ಜಿಲ್ಲೆಗಳಿಗೆ ಬಜೆಟ್‌ನಲ್ಲಿ ಏನೇನು ಘೋಷಣೆ..? ಇಲ್ಲಿದೆ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹಲವು ಘೋಷಣೆ ಮಾಡಿದ್ದಾರೆ.
ಕರಾವಳಿ ಪ್ರದೇಶಗಳಲ್ಲಿ ನದಿಗಳ ಪ್ರವಾಹ ಉಂಟಾದಾಗ ಮತ್ತು ಭಾರೀ ಅಲೆಗಳಿಂದ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರನ್ನು ತಡೆಗಟ್ಟಲು ಉದ್ದೇಶಿಸಿರುವ ಖಾರ್ ಲ್ಯಾಂಡ್ ಯೋಜನೆಯಡಿ 1500 ಕೋಟಿ ರೂ ಅಂದಾಜು ಮೊತ್ತದ ಮಾಸ್ಟರ್ ಪ್ಲಾನ್ ಗೆ ಒಪ್ಪಿಗೆಯ ಪ್ರಸ್ತಾವನೆ, ಪ್ರಸ್ತುತ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಮಗಾರಿ ಅನುಷ್ಠಾನ. ಈ ಸಾಲಿನಲ್ಲಿ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನುಷ್ಠಾನಗೊಳಿಸಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಕೇಣಿ ಬೇಲೇಕೇರಿಯಲ್ಲಿ ಗ್ರೀನ್ ಫೀಲ್ಡ್ ಬಂದರನ್ನು ಅಭಿವೃದ್ಧಿಪಡಿಸುವ ಪ್ರಸ್ತಾವನೆ ಮಾಡಲಾಗಿದೆ. ಪ್ರವಾಸೋದ್ಯಮ ಮತ್ತು ಸಾರಿಗೆ ಅಗತ್ಯ ಪೂರೈಸಲು ತದಡಿ-ಅಘನಾಶಿನಿ ಮಧ್ಯೆ ಕಡಲುದೋಣಿ ಮಾರ್ಗ ಈ ವರ್ಷದಿಂದ ಆರಂಭ ಮಾಡಲಾಗುತ್ತದೆ.

ಕರಾವಳಿ ಭಾಗದ ಜಲಮೂಲಗಳನ್ನು ಕಲುಷಿತಗೊಳಿಸುತ್ತಿರುವ ಪ್ಲಾಸ್ಟಿಕ್‌ ತ್ಯಾಜ್ಯಗಳ ಮಾಲಿನ್ಯವನ್ನು ನಿರ್ವಹಣೆಗೆ ವಿಶ್ವ ಬ್ಯಾಂಕ್‌ ನೆರವಿನೊಂದಿಗೆ ಬ್ಲ್ಯೂ ಪ್ಲಾಸ್ಟಿಕ್‌ ಯೋಜನೆಯನ್ನು ಮುಂದಿನ ಐದು ವರ್ಷಗಳ ಕಾಲಾವಧಿಯಲ್ಲಿ ಒಟ್ಟು 840 ಕೋಟಿ ರೂ.ಗಳ ವೆಚ್ಚದಲ್ಲಿ ದೇಶದಲ್ಲೇ ಇದೇ ಮೊದಲ ಬಾರಿಗೆ ಕಾರ್ಯರೂಪಕ್ಕೆ ತರಲಾಗುತ್ತದೆ. ಉತ್ತರ ಕನ್ನಡ ಜಿಲ್ಲೆಯ ಯಾಣದಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ರೋಪ್ ವೇ ನಿರ್ಮಿಸಲು ಯೋಜನೆ ಕೈಗೊಳ್ಳಲಾಗುತ್ತದೆ. ಕೇಂದ್ರದ ಸಂಬಂಧಿತ ಸಂಸ್ಥೆಗಳ ಸಹಯೋಗದೊಂದಿಗೆ ಕಾರವರದಲ್ಲಿ ಜಲಸಾರಿಗೆ ಮತ್ತು ಮೀನುಗಾರಿಕೆ ತರಬೇತಿ ಸಂಸ್ಥೆಯನ್ನು ಸ್ಥಾಪಿಸುವ ಪ್ರಸ್ತಾವನೆ ಮಾಡಲಾಗಿದೆ.
ಕೇಂದ್ರ ಸರ್ಕಾರದ ನೆರವಿನೊಂದಿಗೆ 350 ಕೋಟಿ ರೂ ಅಂದಾಜು ವೆಚ್ಚದಲ್ಲಿ ಮಂಗಳೂರು ಬಂದರನ್ನು ವಿಸ್ತರಿಸಲಾಗುತ್ತದೆ.
ಕರಾವಳಿ ಪ್ರದೇಶದಲ್ಲಿ 1,880 ಕೋಟಿ ರೂ ವೆಚ್ಚದ 24 ಯೋಜನೆಗಳನ್ನು ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆಯಡಿ ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಈ ಯೋಜನೆಯಡಿ ಕಾರವಾರ ಬಂದರಿನ ವಿಸ್ತರ ಪ್ರಸ್ತಾಪ, ಬೈಂದೂರು ಮತ್ತು ಮಲ್ಪೆ ಪ್ರದೇಶಗಳಲ್ಲಿ ವಿವಿಧೋದ್ದೇಶ ಬಂದರುಗಳ ನಿರ್ಮಾಣ ಮಾಡಲು ಕಾರ್ಯಸಾಧ್ಯತಾ ವರದಿ ತಯಾರಿ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾವನೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಕಡೂರು| ದುಷ್ಕರ್ಮಿಗಳಿಂದ ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

ಆಳ ಸಮುದ್ರದ 100 ಮೀನುಗಾರಿಕಾ ದೋಣಿಗಳಿಗೆ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ ಮತ್ಯ್ಸ ಸಿರಿ ಎಂಬ ಯೋಜನೆಯನ್ನು ಇದೇ ಮೊದಲ ಬಾರಿಗೆ ರೂಪಿಸುವ ಘೋಷಣೆ ಮಾಡಿದ್ದಾರೆ.
ಈ ಸಾಲಿನಲ್ಲಿ 5000 ವಸತಿರಹಿತ ಮೀನುಗಾರರಿಗೆ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಆದ್ಯತೆ ಮೇರೆಗೆ ಮನೆಗಳನ್ನು ನಿರ್ಮಿಸುವ ಭರವಸೆ ನೀಡಿದ್ದಾರೆ. ರಾಜ್ಯದ 8 ಮೀನುಗಾರಿಕೆ ಬಂದರುಗಳಲ್ಲಿ ಮೀನುಗಾರಿಕಾ ದೋಣಿಗಳು ಸುಗಮವಾಗಿ ಮತ್ತು ವೇಗವಾಗಿ ಚಲಿಸಲು ಅನುಕೂಲವಾಗಿಸಲು ನ್ಯಾವಿಗೇಶನ್ ಚಾನಲ್ ಗಳಲ್ಲಿ ಹಂತ ಹಂತವಾಗಿ ಹೂಳೆತ್ತಲಾಗುತ್ತದೆ.

ಪ್ರಗತಿಯಲ್ಲಿರುವ ಸೌಕೂರು, ಎಣ್ಣೆಹೊಳೆ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಿ ಬಾಕಿಯಿರುವ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತದೆ.
ನಾರಾಯಣ ಗುರು ಸ್ಮರಣಾರ್ಥ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದು ನಾರಾಯಣ ಗುರು ವಸತಿ ಶಾಲೆ ಆರಂಭ,
ಮಂಗಳೂರು ವಿಶ್ವವಿದ್ಯಾಲಯದಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು. ನೆರೆ ರಾಜ್ಯದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅಭಿವೃದ್ಧಿಪಡಿಸು ಕಾಸರಗೋಡಿನಲ್ಲಿ ಕಯ್ಯಾರ ಕಿಂಞಣ್ಣ ರೈ ಹೆಸರಿನಲ್ಲಿ ಕನ್ನಡ ಭವನ ನಿರ್ಮಾಣ ಮಾಡಲಾಗುತ್ತದೆ.

ಪ್ರಮುಖ ಸುದ್ದಿ :-   ಬೆಳಗಾವಿ | ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು ; ಪ್ರತಿಭಟನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement