ಸರ್ಕಾರದ ನಿಯಂತ್ರಣದಿಂದ ದೇವಾಲಯಗಳಿಗೆ ಮುಕ್ತಿ, ಸ್ವಾಯತ್ತತೆ: ಬಜೆಟ್‌ನಲ್ಲಿ ಬೊಮ್ಮಾಯಿ ಪ್ರಸ್ತಾಪ

ಬೆಂಗಳೂರು: ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸ್ವಾಯತ್ತತೆ ನೀಡಿ ಅಭಿವೃದ್ಧಿ ಕಾಮಗಾರಿಗಳ ವಿವೇಚನೆಯನ್ನ ದೇವಾಲಯಗಳಿಗೆ ಪ್ರತ್ಯಾ ಯೋಜಿಸಲು ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು, ಶುಕ್ರವಾರ ಮಂಡಿಸಿದ 2022-23ನೇ ಸಾಲಿನ ಬಜೆಟ್‍ನಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ದೇವಾಲಯಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಿಗೊಳಿಸಬೇಕೆಂಬ ಬೇಡಿಕೆ ಬಹುಕಾಲದಿಂದ ಕೇಳಿಬರುತ್ತಿದೆ. ಭಕ್ತಾದಿಗಳ ಬೇಡಿಯನ್ನು ಪರಿಗಣಿಸಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಸ್ಥಾನಗಳಿಗೆ ಸ್ವಾಯತ್ತತೆ ನೀಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು. ಈ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳ ಅರ್ಚಕರ ಆಗಮಿಕರ ನೌಕರರಿಗೆ ನೆರವಾಗಲು ತಸ್ತಿಕ್ ಮೊತ್ತವನ್ನು 48 ಸಾವಿರ ರೂ.ಗಳಿಂದ 60 ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.
ದೇವಾಲಯಗಳ ಸೇವೆಗಳು ಭಕ್ತರಿಗೆ ಆನ್ಲೈನ್ ಮೂಲಕ ಸಿಗುವಂತಾಗಲು ತಂತ್ರಾಂಶವನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಅವರು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement