ಮಾರ್ಚ್‌ 10ರಂದು ವಿಟಿಯು 21ನೇ ಘಟಿಕೋತ್ಸವ: 16 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಬುಷ್ರಾ ಮತೀನ್‌, ಮೂವರಿಗೆ ಗೌರವ ಡಾಕ್ಟರೇಟ್‌ ಪ್ರದಾನ

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21 ನೇ ಘಟಿಕೋತ್ಸವವನ್ನು ಗುರುವಾರ, ಮಾರ್ಚ್‌ 10ರಂದು ವಿಟಿಯು ಜ್ಞಾನ ಸಂಗಮ ಆವರಣದ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ. ಮೂವರಿಗೆ ಡಾಕ್ಟರ್ ಆಫ್ ಸೈನ್ಸ್ ಗೌರವ ಪ್ರದಾನ ಮಾಡಲಾಗುವುದು ಮತ್ತು ವಿವಿಧ ಜಿಲ್ಲೆಗಳ ಒಟ್ಟು 334 ವಿದ್ಯಾರ್ಥಿಗಳು ರ್ಯಾಂಕ ಪಡೆದಿದ್ದು, ಅದರಲ್ಲಿ ಹತ್ತು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಕರಿಸಿದ್ದಪ್ಪ ತಿಳಿಸಿದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 21ನೇ ಘಟಿಕೋತ್ಸವದ ಕುರಿತು ವಿಟಿಯು ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ 21 ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಲೋಕಸಭೆ ಸಭಾಪತಿಗಳಾದ ಓಂ ಬಿರ್ಲಾ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಡಾ.ಅಶ್ವತ್ಥ ನಾರಾಯಣ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಪದ್ಮ ಭೂಷಣ ಪುರಸ್ಕೃತರ, ಬೆಂಗಳೂರಿನ ಅಕ್ಸಿಲೊರ್ ವೆಂಚರ್ಸನ ಅಧ್ಯಕ್ಷರು ಹಾಗೂ ಇನ್ಫೋಸಿಸ್ ನ ಸಹ-ಸಂಸ್ಥಾಪಕರಾದ ಸೇನಾಪತಿ ಕ್ರಿಶ್ ಗೋಪಾಲಕೃಷ್ಣನ್, ಪದ್ಮ ಭೂಷಣ ಪುರಸ್ಕೃತರಾದ, ಹೈದರಾಬಾದಿನ ಭಾರತ ಬಯೋಟೆಕ್ ಅಂ. ಲಿ. ನ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಕೃಷ್ಣ ಎಲ್ಲಾ ಹಾಗೂ ಪದ್ಮಶ್ರೀ ಪುರಸ್ಕೃತರಾದ, ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ, ಹೈ ಎನರ್ಜಿ ಭೌತಿಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಪ್ರೊ..ರೋಹಿಣಿ ಗೊಡಬೋಲೆ ಅವರಿಗೆ ಡಾಕ್ಟರ್ ಆಫ್‌ ಸೈನ್ಸ್ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

ಹತ್ತು ವಿದ್ಯಾರ್ಥಿಗಳಿಗೆ ಚಿನ್ನದ ಪದಕ :
ರಾಯಚೂರು ಎಸ್ ಎಲ್ ಎನ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಬುಷ್ರಾ ಮತೀನ್ ಒಟ್ಟು 16 ಚಿನ್ನದ ಪದಕ ಪಡೆಯುವ ಮೂಲಕ ಅತೀ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿಯಾಗಿದ್ದಾಳೆ. ಬೆಂಗಳೂರಿನ ಬಿ.ಎನ್.ಎಂ. ಇನ್‌ಸ್ಟಿಟ್ಯೂಟ್ ಆಫ್‌ ಟೆಕ್ನಾಲಜಿಯ ಎಲೆಕ್ಟ್ರಿಕಲ್‌ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ವಾತಿ ದಯಾನಂದ ಏಳು ಚಿನ್ನದ ಪದಕ ಪಡೆದಿದ್ದಾರೆ.
ಕೆ.ಎಲ್.ಇ ಶೇಷಗಿರಿ ಕಾಲೇಜಿನ ವಿದ್ಯಾರ್ಥಿ ವಿವೇಕ ಭದ್ರಕಾಳಿ ಏಳು ಚಿನ್ನದ ಪದಕ, ಬಳ್ಳಾರಿಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮ್ಯಾನೇಜ್ಮೆಂಟ್ ನ ವಿದ್ಯಾರ್ಥಿನಿ ಚಂದನಾ ಎಂ. ಏಳು ಚಿನ್ನದ ಪದಕ, ಬೆಂಗಳೂರಿನ ಸಿ.ಎಂ.ಆರ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕೊಂದಲ ಹಳ್ಳಿಯ ವಿದ್ಯಾರ್ಥಿನಿ ರಮ್ಯಾ ಟಿ. ಆರು ಚಿನ್ನದ ಪದಕ, ಬೆಂಗಳೂರಿನ ಆರ್ ಎನ್ ಎಸ್ ನಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿನಿ ಪ್ರಜ್ಞಾ ಎನ್. ನಾಲ್ಕು ಚಿನ್ನದ ಪದಕ, ಶಿವಮೊಗ್ಗದ ಜೆ.ಎನ್.ಎನ್. ಸಿ.ಇ ವಿದ್ಯಾರ್ಥಿನಿ ಪಲ್ಲವಿ ಪಿ. ನಾಲ್ಕು ಚಿನ್ನದ ಪದಕ, ಬೆಂಗಳೂರಿನ ಆರ್ ಎನ್ ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿದ್ಯಾರ್ಥಿನಿ ತೇಜಸ್ವಿನಿ ಆರ್ ನಾಲ್ಕು ಚಿನ್ನದ ಪದಕ ಹಾಗೂ ಅಶ್ವಿತಾ ಎನ್. ಮೂರು ಚಿನ್ನದ ಪದಕ ಮತ್ತು ದಾವಣಗೆರೆಯ ಯು.ಬಿ.ಡಿ.ಟಿ ಕಾಲೇಜಿನ ವಿದ್ಯಾರ್ಥಿನಿ ಸವಿತಾ ಎಚ್. ಟಿ. ಮೂರು ಚಿನ್ನದ ಪದಕ ಪಡೆದಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಸಂಶೋಧನಾ ಅಧ್ಯಯನ ಮುಗಿಸಿದ ಸಂಶೋಧನಾರ್ಥಿಗಳಿಗೆ 515+ ಪಿಎಚ್ ಡಿ, 04 ಎಂಎಸ್ಸಿ (ಎಂಜಿನಿಯರಿಂಗ್) ಬೈ ರಿಸರ್ಚ್ ಮತ್ತು 3 ಇಂಟಿಗ್ರೇಟೆಡ್ ಡುಯಲ್ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.
ವಿಶ್ವವಿದ್ಯಾಲಯ 21 ನೇ ಘಟಿಕೋತ್ಸವದಲ್ಲಿ 57,498 ಬಿಇ/ಬಿಟೆಕ್ ಪದವಿ, 902 ಬಿ.ಆರ್ಚ್ ಪದವಿ, 12 ಬಿ.ಪ್ಲೇನ್ ಪದವಿ , 4362 ಎಂಬಿಎ ಪದವಿ, 1387 , ಎಂಟೆಕ್ ಹಾಗೂ 33 ಪಿಜಿ ಡಿಪ್ಲೋಮಾ ಪದವಿಯನ್ನು ಪ್ರದಾನ ಮಾಡಲಾಗುತ್ತದೆ.
ಘಟಕೋತ್ಸವಕೆ ಆಗಮಿಸುವ ವಿದ್ಯಾರ್ಥಿಗಳು, ಪಾಲಕರು ಹಾಗೂ ಆಹ್ವಾನಿತರಿಗೆ ಸಾರಿಗೆ ಇಲಾಖೆಯಿಂದ ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು, ವಿಶ್ವ ವಿದ್ಯಾಲಯದಲ್ಲಿ ಇತರೆ ವ್ಯವಸ್ಥೆ ಕಲ್ಪಿಸಲು ಇಬ್ಬರು ಕೊ-ಆರ್ಡಿನೆಟರ್ ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಪ್ರೊ. ಆನಂದ ದೇಶಪಾಂಡೆ ಹಾಗೂ ಮೌಲ್ಯಮಾಪನ ಕುಲಸಚಿವ ಪ್ರೊ. ಬಿ. ಈ ರಂಗಸ್ವಾಮಿ ಉಪಸ್ಥಿತರಿದ್ದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement