ಉತ್ತರ ಪ್ರದೇಶ ಚುನಾವಣೆ 2022: ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಪುತ್ರ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ..!

ಅಜಂಗಢ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಕೊನೆಯ ಹಂತಕ್ಕೆ ಮುನ್ನ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಾಯಾಂಕ್ ಜೋಶಿ ಅವರು ಶನಿವಾರ ಸಮಾಜವಾದಿ ಪಕ್ಷಕ್ಕೆ (ಎಸ್‌ಪಿ) ಸೇರ್ಪಡೆಗೊಂಡಿದ್ದಾರೆ. “ಭಾರತೀಯ ಜನತಾ ಪಕ್ಷದ ಸಂಸದೆ ರೀಟಾ ಬಹುಗುಣ ಜೋಶಿ ಅವರ ಪುತ್ರ ಮಾಯಾಂಕ್ ಜೋಶಿ ಇಂದು ಸಮಾಜವಾದಿ ಪಕ್ಷಕ್ಕೆ ಸೇರಿದ್ದಾರೆ” ಎಂದು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅಜಂಗಢದಲ್ಲಿ ರ್ಯಾಲಿಯನ್ನುದ್ದೇಶಿಸಿ ಹೇಳಿದರು.

ಜನವರಿಯಲ್ಲಿ, ರೀಟಾ ಬಹುಗುಣ ಜೋಶಿ ಅವರು ತಮ್ಮ ಮಗನಿಗೆ 2022 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಲಕ್ನೋ ಕಂಟೋನ್ಮೆಂಟ್ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೇಳಿದ್ದರು. ಈ ಕ್ಷೇತ್ರದಿಂದ ಮಗನಿಗೆ ಟಿಕೆಟ್ ಸಿಗದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವುದಾಗಿ ಜೋಶಿ ಹೇಳಿದ್ದರು. ಆದರೆ ತನ್ನ ಮಗನಿಗೆ ಟಿಕೆಟ್ ನಿರಾಕರಿಸಿದ ನಂತರ ಅವರು “ಪಕ್ಷದ ನಿರ್ಧಾರವನ್ನು ಗೌರವಿಸುತ್ತೇನೆ” ಎಂದು ಹೇಳಿದ್ದರು. ಜೋಶಿ ಅವರು 2017 ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಮತ್ತು ಲಕ್ನೋ ಕಂಟೋನ್ಮೆಂಟ್‌ನಿಂದ ಎಸ್‌ಪಿ ಅಭ್ಯರ್ಥಿಯಾಗಿದ್ದ ಅಪರ್ಣಾ ಯಾದವ್ ಅವರನ್ನು ಸೋಲಿಸಿದ್ದರು.
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಉತ್ತರ ಪ್ರದೇಶದಲ್ಲಿ ಆರು ಹಂತಗಳಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ರಂದು ಮತ್ತು ಕೊನೆಯ ಹಂತದ ಮತದಾನ ಮಾರ್ಚ್ 7 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ

ಪ್ರಮುಖ ಸುದ್ದಿ :-   ಗೂಢಲಿಪಿ ಬಹಿರಂಗಗೊಳಿಸಲು ಒತ್ತಾಯಿಸಿದರೆ ಭಾರತದಿಂದ ನಿರ್ಗಮಿಸಬೇಕಾಗ್ತದೆ ಎಂದ ವಾಟ್ಸಾಪ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement