ಮೇಕೆದಾಟು ಯೋಜನೆ: ಕರ್ನಾಟಕ-ತಮಿಳುನಾಡು ಮಾತುಕತೆಗೆ ಆಸಕ್ತಿ ತೋರಿದರೆ ಮಧ್ಯಸ್ಥಿಕೆಗೆ ಕೇಂದ್ರ ಸಿದ್ಧ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ಮಾತುಕತೆಗೆ ಆಸಕ್ತಿ ವ್ಯಕ್ತಪಡಿಸಿದರೆ ಕೇಂದ್ರ ಮಧ್ಯಪ್ರವೇಶಕ್ಕೆ ಸಿದ್ಧವಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ಹೋರಾಟಕ್ಕೆ ಪ್ರತಿಕ್ರಿಯೆ ನೀಡಿ ಈ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ ಈ ಬಗ್ಗೆ ಹೆಚ್ಚು ಮಾತನಾಡುವುದು ಸೂಕ್ತವಲ್ಲ ಎಂದು ಅವರು ಹೇಳಿದರು.

ಮೇಕೆದಾಟು ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳ‌ ನಡುವಿನ ಸಮಸ್ಯೆ. ಎರಡು ರಾಜ್ಯಗಳು ಪರಸ್ಪರ ಮಾತುಕತೆ ನಡೆಸುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವುದು ಸೂಕ್ತ.‌ ಎರಡು ರಾಜ್ಯಗಳು ಮಾತುಕತೆಗೆ ಆಸಕ್ತಿ ವ್ಯಕ್ತಪಡಿಸಿದರೆ ಕೇಂದ್ರ ಸಹಕಾರಕ್ಕೆ ಸಿದ್ದವಿದೆ ಎಂದು ಅವರು ತಿಳಿಸಿದರು.
ಕೆನ್ – ಬೆತ್ವಾ ನದಿಗಳ ಜೋಡಣೆ ವಿಚಾರವಾಗಿ ಉತ್ತರ ಪ್ರದೇಶ ಹಾಗೂ ಮಧ್ಯ ಪ್ರದೇಶದ ನಡುವೆ ಸಮಸ್ಯೆ ಇತ್ತು. ಈ ಸಮಸ್ಯೆಯಿಂದ ನದಿ ಜೋಡಣೆ ಯೋಜನೆ ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದಿತ್ತು. ಈಗ ಉಭಯ ರಾಜ್ಯಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿವೆ.. ಇದರಿಂದ ಬರ ಪೀಡಿತ ಬುಂದೇಲ್‌ಖಂಡ ಪ್ರದೇಶದ ನೀರಿನ‌ ದಾಹ ತಣಿಸಲು ನದಿ‌ ಜೋಡಣೆ ನೆರವಾಯಿತು. ಇದೇ ಮಾದರಿಯನ್ನು ತಮಿಳುನಾಡು ಹಾಗೂ ಕರ್ನಾಟಕ ಸಮಸ್ಯೆ ಬಗೆಹರಿಸಿಕೊಳ್ಳಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಮುಖ ಸುದ್ದಿ :-   ಐಪಿಎಸ್ ಅಧಿಕಾರಿ ಅಮಾನತು ರದ್ದು: ಸಿಎಟಿ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರದಿಂದ ಹೈಕೋರ್ಟ್‌ನಲ್ಲಿ ಮೇಲ್ಮನವಿ

ಮೇಕೆದಾಟು ಯೋಜನೆ ವಿಚಾರವಾಗಿ ಕಾಂಗ್ರೆಸ್‌ಗೆ ಈ ವಿಚಾರವಾಗಿ ಹೋರಾಟ ಮಾಡುವ ನೈತಿಕತೆ‌ ಇಲ್ಲ. 55 ವರ್ಷ ಕಾಂಗ್ರೆಸ್ ಅಧಿಕಾರದಲ್ಲಿತ್ತು. ತನ್ನ ಅವಧಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದರೆ ಈ ಸಮಸ್ಯೆ ಉದ್ಭವವಾಗುತ್ತಿರಲಿಲ್ಲ. ಹೀಗಾಗಿ ಕಾಂಗ್ರೆಸ್‌ಗೆ ಈ ವಿಚಾರವಾಗಿ ಹೋರಾಟ ಮಾಡುವ ನೈತಿಕತೆ‌ ಇಲ್ಲ ಎಂದರು.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement