ಆಪರೇಶನ್‌ ಗಂಗಾ ಕಾರ್ಯಾಚರಣೆಯ ಯಶಸ್ಸಿಗೆ ಭಾರತದ ಹೆಚ್ಚುತ್ತಿರುವ ಪ್ರಭಾವವೇ ಕಾರಣ: ಪ್ರಧಾನಿ ಮೋದಿ

ಪುಣೆ: ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯ ‘ಆಪರೇಷನ್ ಗಂಗಾ’ ಯಶಸ್ಸಿಗೆ ಜಾಗತಿಕ ರಂಗದಲ್ಲಿ ಭಾರತದ ಹೆಚ್ಚುತ್ತಿರುವ ಪ್ರಭಾವವೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪುಣೆಯಲ್ಲಿ ಸಿಂಬಯಾಸಿಸ್ ವಿಶ್ವವಿದ್ಯಾನಿಲಯದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ, ಈ ಹೇಳಿಕೆ ನೀಡಿದ್ದಾರೆ. ಆಪರೇಷನ್ ಗಂಗಾ ಮೂಲಕ ನಾವು ಸಾವಿರಾರು ಭಾರತೀಯರನ್ನು ಯುದ್ಧ ವಲಯದಿಂದ ಸುರಕ್ಷಿತವಾಗಿ ಸ್ಥಳಾಂತರಿಸುತ್ತಿದ್ದೇವೆ ಎಂದು ಮೋದಿ ಹೇಳಿದ್ದಾರೆ.
ಭಾರತದ ಬೆಳೆಯುತ್ತಿರುವ ಪ್ರಭಾವದಿಂದಾಗಿ ಉಕ್ರೇನ್‌ನ ಯುದ್ಧ ವಲಯದಿಂದ ಸಾವಿರಾರು ವಿದ್ಯಾರ್ಥಿಗಳನ್ನು ತಮ್ಮ ತಾಯ್ನಾಡಿಗೆ ಮರಳಿತರಲು ಸಾಧ್ಯವಾಗಿದೆ” ಎಂದು ಅವರು ಹೇಳಿದರು.
ಹಲವಾರು ದೊಡ್ಡ ದೇಶಗಳು ತಮ್ಮ ನಾಗರಿಕರನ್ನು ಸ್ಥಳಾಂತರಿಸುವಲ್ಲಿ ಕಠಿಣ ಪರಿಸ್ಥತಿಗಳನ್ನು ಎದುರಿಸುತ್ತಿವೆ ಎಂದು ಅವರು ಹೇಳಿದರು.

ಶನಿವಾರ, ಸರ್ಕಾರವು ಹೇಳಿಕೆಯಲ್ಲಿ ಭಾರತ ಸರ್ಕಾರದ ಆಪರೇಷನ್ ಗಂಗಾ ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಕ್ಕಿಬಿದ್ದ 13,700 ನಾಗರಿಕರನ್ನು ಸುರಕ್ಷಿತವಾಗಿ ಮನೆಗೆ ಮರಳಿಸಿದೆ ಎಂದು ಹೇಳಿದೆ. ವಿಶೇಷ ವಿಮಾನಗಳು ಕಳೆದ ವಾರದಿಂದ ಪ್ರಾರಂಭವಾಗಿವೆ.

advertisement

ನಿಮ್ಮ ಕಾಮೆಂಟ್ ಬರೆಯಿರಿ