ಬೆಳಗಾವಿ: ಬಿಡಿಸಿಸಿ ಬ್ಯಾಂಕ್‌ ಶಾಖೆಯಲ್ಲಿ ದರೋಡೆ: ನಗದು-ಚಿನ್ನಾಭರಣ ಸೇರಿ ಅಂದಾಜು 6 ಕೋಟಿ ರೂ. ಮೌಲ್ಯದ ಸ್ವತ್ತು ಕಳುವು

ಬೆಳಗಾವಿ: ರಾಜ್ಯದಲ್ಲೇ ಅತಿದೊಡ್ಡ ಬ್ಯಾಂಕ್ ದರೋಡೆಯೊಂದು ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರಗೋಡದಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಮುರಗೋಡದ ಬಿಡಿಡಿಸಿ ಬ್ಯಾಂಕ್ ಶಾಖೆಯ ಬಾಗಿಲು ಮುರಿದು ಒಳ ನುಗ್ಗಿದ ದರೋಡೆಕೋರರು, ಸುಮಾರು 4.37 ಕೋಟಿ ರೂ. ನಗದು, 1.63 ಕೋಟಿ ರೂ. ಮೌಲ್ಯದ 3 ಕೆ.ಜಿ. 184 ಗ್ರಾಂ. ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ನಕಲಿ ಕೀ ಬಳಸಿ ಬ್ಯಾಂಕ್‌ನ ಶೆಟರ್ಸ್, ಬಾಗಿಲು, ಸ್ಟ್ರಾಂಗ್ ರೂಂ ಹಾಗೂ ಲಾಕರ್‌ಗಳನ್ನು ತೆಗೆದು ಕಳವು ಮಾಡಲಾಗಿದೆ. ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಅನ್ನೂ ಕಳ್ಳರು ಹೊತ್ತೊಯ್ದಿದ್ದಾರೆ. ಕಳವಾದ ಸ್ವತ್ತುಗಳ ಮೌಲ್ಯ ಒಟ್ಟು 6.01 ಕೋಟಿ ರೂ. ಆಗುತ್ತದೆ ಎಂದು ಅಂದಾಜಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
‘ಬ್ಯಾಂಕಿನಲ್ಲಿ 4.41 ಕೋಟಿ ಇತ್ತು. ಅದರಲ್ಲಿ 4.30 ಲಕ್ಷ ರೂ. ಮಾತ್ರ ಉಳಿದಿದೆ. ಲಾಕರ್ ಹಾಗೂ ಸ್ಟ್ರಾಂಗ್ ರೂಂನಲ್ಲಿ ನಗದನ್ನು ಇಡಲಾಗಿತ್ತು. ಭದ್ರತಾ ಸಿಬ್ಬಂದಿ ಕೆಲಸದಲ್ಲಿದ್ದರು. ಬೆಳಿಗ್ಗೆ ನೋಡಿದಾಗ ಕಳವಾಗಿರುವುದು ಗೊತ್ತಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಈ ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಬ್ಯಾಂಕ್ ಅಧಿಕಾರಿಗಳ ದೂರಿನ ಮೇರೆಗೆ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಆರೋಪಿಗಳ ಪತ್ತೆಗೆ ಅಗತ್ಯವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement