ಗೋವಾ ರಾಜ್ಯದ ಬಹುತೇಕ ಎಕ್ಸಿಟ್ ಪೋಲ್ ಪ್ರಕ್ಷೇಪಗಳು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿವೆ.
ಝೀ ನ್ಯೂಸ್ ಎಕ್ಸಿಟ್ ಪೋಲ್ ಸಮೀಕ್ಷೆಯ ಪ್ರಕಾರ, ರಾಜ್ಯದಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಏಕೈಕ ದೊಡ್ಡ ಪಕ್ಷವಾಗಬಹುದು, ಅದು 14-19 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) 13-18 ಸ್ಥಾನಗಳನ್ನು ಗೆಲ್ಲಬಹುದು ಮತ್ತು ಎಎಪಿ ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಟೈಮ್ಸ್ ನೌ-ವೀಟೊ ಸಮೀಕ್ಷೆಯು ಕಾಂಗ್ರೆಸ್ 16 ಸ್ಥಾನಗಳೊಂದಿಗೆ ಏಕೈಕ ದೊಡ್ಡ ಪಕ್ಷವಾಗಲಿದೆ ಎಂದು ಭವಿಷ್ಯ ನುಡಿದಿದೆ. ಬಿಜೆಪಿ ಮತ್ತು ಎಎಪಿ ಕ್ರಮವಾಗಿ 14 ಮತ್ತು 4 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದೆ.
ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಕೂಡ ಕಾಂಗ್ರೆಸ್ 15-20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಲಿದೆ, ಬಿಜೆಪಿ 14-18 ಸ್ಥಾನಗಳಲ್ಲಿ ಮುನ್ನಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಟಿಎಂಸಿ 02-05 ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಹೇಳಿದೆ.
ಎಬಿಪಿ-ಸಿವೋಟರ್ ಸಮೀಕ್ಷೆಯು ಕಾಂಗ್ರೆಸ್ಗಿಂತ ಬಿಜೆಪಿಗೆ ಮುನ್ನಡೆ ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ.
ಫೆಬ್ರವರಿ 14, ಸೋಮವಾರದಂದು ಗೋವಾ ಚುನಾವಣೆಗೆ ಮತದಾನ ನಡೆದಿದ್ದು, ರಾಜ್ಯಾದ್ಯಂತ 40 ಸ್ಥಾನಗಳಿಗೆ 78.94 ರಷ್ಟು ಮತದಾನವಾಗಿದೆ
ನಿಮ್ಮ ಕಾಮೆಂಟ್ ಬರೆಯಿರಿ