ಬೆಂಗಳೂರು: ತಮಿಳುನಾಡು ಸಚಿವರ ಪುತ್ರಿಯ ಅಪಹರಣ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಪುತ್ರಿ ಮತ್ತು ಪ್ರಿಯಕರ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿ ತಮಗೆ ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ.
ತಮಿಳುನಾಡು ಸರ್ಕಾರದ ಮುಜರಾಯಿ ಸಚಿವ ಶೇಖರ್ ಬಾಬು ಪುತ್ರಿ ಜಯಕಲ್ಯಾಣಿ ಸತೀಶ್ ಕುಮಾರ್ ಎಂಬವರನ್ನು ಪ್ರೀತಿಸುತ್ತಿದ್ದರು. ಈ ವಿಚಾರವಾಗಿ ತಮಿಳುನಾಡಿನಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ವಿರೋಧದ ನಡುವೆ ಜಯಕಲ್ಯಾಣಿ ತಮಿಳುನಾಡಿನಿಂದ ಪರಾರಿಯಾಗಿದ್ದರು. ನಾಪತ್ತೆಯಾದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ ಜಯಕಲ್ಯಾಣಿ ಕಿಡ್ನ್ಯಾಪ್ ಆಗಿದ್ದಾರೆ ಎಂದು ಪ್ರಕರಣ ದಾಖಲಿಸಲಾಗಿತ್ತು
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155
ಈಗ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಜಯಕಲ್ಯಾಣಿ ತಮ್ಮ ಪ್ರಿಯಕರ ಸತೀಶ್ ಕುಮಾರ ಅವರನ್ನು ಮದುವೆಯಾಗಿದ್ದಾರೆ. ತಮ್ಮ ಪ್ರೀತಿಗೆ ತಂದೆಯ ವಿರೋಧ ಉಂಟಾದ ಹಿನ್ನೆಲೆಯಲ್ಲಿ ರಕ್ಷಣೆ ನೀಡುವಂತೆ ಅವರು ಬೆಂಗಳೂರಿನ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ತಮಗೆ ತಮ್ಮ ತಂದೆ ಸಚಿವ ಶೇಖರಬಾಬು ಅವರಿಂದ ಜೀವ ಬೆದರಿಕೆ ಇದೆ, ತಮ್ಮ ತಂದೆ ಸಚಿವರಾಗಿರುವುದರಿಂದ ನಮಗೆ ತಮಿಳುನಾಡು ಸರ್ಕಾರದಿಂದ ಯಾವುದೇ ಸಹಾಯ ಸಿಗುವುದಿಲ್ಲ. ಹೀಗಾಗಿ, ಕರ್ನಾಟಕ ಪೊಲೀಸರ ಬಳಿ ರಕ್ಷಣೆಗಾಗಿ ಮನವಿ ಮಾಡಿರುವುದಾಗಿ ಅವರು ತಿಳಿಸಿದ್ದಾರೆ.
ತಮಿಳುನಾಡು ಮುಜರಾಯಿ ಇಲಾಖೆ ಸಚಿವ ಶೇಖರಬಾಬು ಅವರ ಮಗಳು ಜಯಕಲ್ಯಾಣಿ ಹಾಗೂ ಸತೀಶ್ ಕುಮಾರ್ ಕಳೆದ 6 ವರ್ಷದಿಂದ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಮನೆಯವರು ಒಪ್ಪದ ಕಾರಣ ಅವರಿಬ್ಬರು 6 ತಿಂಗಳ ಹಿಂದೆ ಅವರಿಬ್ಬರೂ ಓಡಿಹೋಗಲು ನಿರ್ಧರಿಸಿದ್ದರು. ಆದರೆ, ಅವರ ತಂದೆ ಸಚಿವ ಶೇಖರ್ ಬಾಬು ತಮ್ಮ ಅಧಿಕಾರ ಬಳಸಿ ಪುಣೆಯಲ್ಲಿ ಅವರಿಬ್ಬರನ್ನು ಪತ್ತೆ ಹಚ್ಚಿ, ವಾಪಸ್ ಕರೆತಂದಿದ್ದರು ಎಂದು ಹೇಳಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಈ ಜೋಡಿ ಮನೆ ಬಿಟ್ಟು ಓಡಿ ಹೋಗಿದ್ದರು. ನಂತರ ಕರ್ನಾಟಕದ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಾಲಸ್ವಾಮಿ ಮಠದಲ್ಲಿ ಮದುವೆಯಾಗಿದ್ದಾರೆ.
ತಮಿಳುನಾಡು ಮುಜರಾಯಿ ಸಚಿವರ ಮಗಳು ಜಯ ಕಲ್ಯಾಣಿ ಎಂಬಿಬಿಎಸ್ ಪದವೀಧರೆಯಾಗಿದ್ದಾರೆ. ಸತೀಶ್ ಕುಮಾರ್ ಡಿಪ್ಲೋಮಾ ಓದಿದ್ದು, ಚೆನ್ನೈನಲ್ಲಿ ಉದ್ಯಮಿಯಾಗಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ