ಸಿಬಿಐನಿಂದ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಬಂಧನ

ನವದೆಹಲಿ: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಚಿತ್ರಾ ರಾಮಕೃಷ್ಣ ಅವರನ್ನು ಸಿಬಿಐ ಬಂಧಿಸಿದೆ. ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದ ನಂತರ ಭಾನುವಾರ ಅವರನ್ನು ನವದೆಹಲಿಯಲ್ಲಿ ಬಂಧಿಸಲಾಯಿತು.
ಚಿತ್ರಾ ರಾಮಕೃಷ್ಣ ಅವರು 2013 ಮತ್ತು 2016 ರ ನಡುವೆ ಎನ್‌ಎಸ್‌ಇ ಸಿಇಒ ಆಗಿ ಕಾರ್ಯನಿರ್ವಹಿಸಿದ್ದಾರೆ. 59 ವರ್ಷ ವಯಸ್ಸಿನ ಮಾಜಿ ಎನ್‌ಎಸ್‌ಇ ಉದ್ಯೋಗಿ ಆನಂದ್ ಸುಬ್ರಮಣ್ಯಂ ಅವರನ್ನು ಒಳಗೊಂಡ ತನಿಖೆಗೆ ಸಂಬಂಧಿಸಿದಂತೆ ಚಿತ್ರಾ ಸಿಬಿಐನ ರಾಡಾರ್‌ನಲ್ಲಿದ್ದಾರೆ.

ಹಿಮಾಲಯದಲ್ಲಿ ವಾಸಿಸುವ ಯೋಗಿ” ಯೊಂದಿಗೆ ಇಮೇಲ್ ಮೂಲಕ ರಾಷ್ಟ್ರೀಯ ಸ್ಟಾಕ್ ಎಕ್ಸ್ಚೇಂಜ್ ಬಗ್ಗೆ ಗೌಪ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು ಅವರ ವಿರುದ್ಧ ಆರೋಪಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಆನಂದ್ ಸುಬ್ರಮಣ್ಯಂ ಈ “ಯೋಗಿ” ಎಂಬ ಶಂಕೆ ವ್ಯಕ್ತವಾಗಿದೆ.
2010 ಮತ್ತು 2015 ರ ನಡುವೆ ಎನ್‌ಎಸ್‌ಇಯಲ್ಲಿ ಆಪಾದಿತ ಅನ್ಯಾಯದ ಅಭ್ಯಾಸಗಳಿಗೆ ಸಂಬಂಧಿಸಿದಂತೆ ಸೆಬಿ (ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ) ತನ್ನ ಸಂಶೋಧನೆಗಳನ್ನು ಸಾರ್ವಜನಿಕಗೊಳಿಸಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ.

ಓದಿರಿ :-   ಏಕರೂಪ ನಾಗರಿಕ ಸಂಹಿತೆ, ಜನಸಂಖ್ಯೆ ನಿಯಂತ್ರಣ ಕಾನೂನು ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ರಾಜ್ ಠಾಕ್ರೆ ಒತ್ತಾಯ

ಚಿತ್ರಾ ರಾಮಕೃಷ್ಣ ಅವರು 2014 ರಿಂದ 2016 ರ ಅವಧಿಯಲ್ಲಿ ಇಮೇಲ್ ಪತ್ರವ್ಯವಹಾರ ಮಾಡುವ ಮೂಲಕ ಅಪರಿಚಿತ ವ್ಯಕ್ತಿಯೊಂದಿಗೆ ಎನ್‌ಎಸ್‌ಇಯ ಆಂತರಿಕ ಗೌಪ್ಯ ಮಾಹಿತಿ ಹಂಚಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷ್ಯಚಿತ್ರ ಸಾಕ್ಷ್ಯಗಳು ಸಿಕ್ಕಿವೆ ಎಂದು ಸೆಬಿ ತನ್ನ ಆದೇಶದಲ್ಲಿ ತಿಳಿಸಿದೆ.
2018 ರಲ್ಲಿ ಸಿಬಿಐನಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಸ್ಟಾಕ್ ಬ್ರೋಕರ್ ಸಂಜಯ್ ಗುಪ್ತಾ “ಎನ್‌ಎಸ್‌ಇಯ ಸಹ-ಸ್ಥಳ ಸೌಲಭ್ಯಕ್ಕೆ ಪ್ರವೇಶ (access to the co-location facility of NSE) ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಇದು ಗುಪ್ತಾ ಅವರ ಸಂಸ್ಥೆಯಾದ ಒಪಿಜಿ (OPG) ಸೆಕ್ಯುರಿಟಿ ಲಿಮಿಟೆಡ್‌ಗೆ ಮಾರುಕಟ್ಟೆ ಡೇಟಾವನ್ನು ಬೇರೆಯವರಿಗಿಂತ ಮೊದಲು ಪ್ರವೇಶಿಸಲು ಅನುವು ಮಾಡಿಕೊಟ್ಟಿತು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ