ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಈಗ ರಾಜ್ಯದಲ್ಲಿ ಬೇಸಿಗೆ ಬಿಸಲು ಆರಂಭವಾಗಿದೆ. ಆದರೆ ರಾಜ್ಯದ ಹಲವೆಡೆ ಎರಡು ದಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್ 7, 8 ಹಾಗೂ 9ರಂದು ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಇದೆ ಎಂದು ಅದು ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ (IMD) ಮುನ್ಸೂಚನೆ ನೀಡಿದೆ.

ಮಾರ್ಚ್ 7ರಂದು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಾಗೂ ಪಶ್ಚಿಮ ಘಟ್ಟದ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಮಾರ್ಚ್ 9ರ ವರೆಗೂ ಪಶ್ಚಿಮ ಘಟ್ಟ ಭಾಗಗಳಲ್ಲಿ ಹಾಗೂ ಮಾರ್ಚ್ 8 ಮತ್ತು 9ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ಸುರಿಯುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಂಗಾಳ ಕೊಲ್ಲಿಯ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮಾತ್ರವಲ್ಲದೆ, ನೆರೆಯ ತಮಿಳುನಾಡು ಹಾಗೂ ಶ್ರೀಲಂಕಾದಲ್ಲಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ತಮಿಳುನಾಡಿನ ಉತ್ತರ ಕರಾವಳಿ, ಪುದುಚೆರಿ, ಕಾರೈಕಲ್‌ಗಳಲ್ಲಿ ಭಾನುವಾರ ಮಳೆಯಾಗಲಿದೆ ಎಂದು ಅದು ಅಂದಾಜಿಸಿದೆ.

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement