ಬೆಳಗಾವಿ: ಸಹೋದ್ಯೋಗಿ ಯೋಧರ ಗುಂಡಿನ ಹಾರಿಸಿ ಕೊಂದು ತಾನೂ ಹತನಾದ ಯೋಧನ ವರ್ತನೆ ಮನಸಿಕ ಖಿನ್ನತೆ ಕಾರಣ..?

ಬೆಳಗಾವಿ: ಭಾನುವಾರ ನಾಲ್ವರು ಬಿಎಸ್‌ಎಫ್‌ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಕೊನೆಗೂ ತಾನೂ ಸಾವಿಗೀಡಾಗಿದ್ದ ಬಿಎಸ್‍ಎಫ್ ಯೋಧ ಮಾನಸಿಕ ಅಸ್ವಸ್ಥನಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಸತ್ಯಪ್ಪ ಸಿದ್ದಪ್ಪ ಎಂಬಾತ ತನ್ನ ಸಹೋದ್ಯೋಗಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾನೆ. ಬಳಿಕ ತನ್ನ ಮೇಲೆಯೆ ಗುಂಡು ಹಾರಿಸಿಕೊಂಡು ಸಾವಿಗೀಡಾಗಿದ್ದಾನೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆ ವಂಟಮೂರಿ ಗ್ರಾಮದ ಯೋಧ ಸತ್ಯಪ್ಪ ಕಳೆದ 13 ವರ್ಷಗಳ ಹಿಂದೆ ಬಿಎಸ್‌ಎಫ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ
ಸತ್ಯಪ್ಪ ವೈಯಕ್ತಿಕವಾಗಿ ತುಂಬಾ ಸಾಲ ಮಾಡಿಕೊಂಡಿದಲ್ಲದೆ ಕೌಟುಂಬಿಕ ವಿಚಾರದಲ್ಲಿಯೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಅವನಿಗೆ ಚಿಕಿತ್ಸೆಯನ್ನು ಸಹ ಕೊಡಿಸಲಾಗಿತ್ತು ಎಂಬುದಾಗಿ ವರದಿಯಾಗಿದೆ.

ನಿನ್ನೆ (ಮಾರ್ಚ್ 6) ಪಂಜಾಬ್​ನ ಅಮೃತಸರ ಅಟ್ಟಾರಿ ಗಡಿಯ ಖೇಸರ್ ಕ್ಯಾಂಪ್ ನಲ್ಲಿ ಐವರು ಯೋಧರ ಮೇಲೆ ಗುಂಡು ತಗುಲಿದ್ದು ಬಳಿಕ ತಾನೂ ಸಹ ಗುಂಡು ಹಾರಿಸಿಕೊಂಡಿದ್ದಾನೆ. ಘಟನೆಯಲ್ಲಿ ಸತ್ಯಪ್ಪ ಸೇರಿದಂತೆ ಐವರು ಯೋಧರು ಮೃತಪಟ್ಟಿದ್ದರು.

ಪ್ರಮುಖ ಸುದ್ದಿ :-   ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಕ್ಕೆ ಹೆದರಲ್ಲ: ಕೆ.ಎಸ್.ಈಶ್ವರಪ್ಪ

ಕಳೆದ ವರ್ಷ ಅಂದಾಜು ಎಂಟ್ಹತ್ತು ಲಕ್ಷ ರೂ. ಸಾಲ ಮಾಡಿದ್ದ ಸತ್ಯಪ್ಪ ಸಾಲ ಪಾವತಿಸುವ ಚಿಂತೆಯಲ್ಲಿ ಮಾನಸಿಕವಾಗಿ ನೊಂದಿದ್ದ. ಮಾನಿಸಕ ಖಿನ್ನತೆಗೆ ಮಾನಸಿಕ ವೈದ್ಯರಿಂದ ಕೌನ್ಸಲಿಂಗ್ ಕೂಡ ಮಾಡಿಸಲಾಗಿತ್ತು. ನಂತರ ಯೋಧ ಕರ್ತವ್ಯ ನಿರ್ವಹಿಸುತ್ತಿದ್ದ ಬಿಎಸ್‍ಎಫ್ ಕಚೇರಿಗೂ ಈ ಕುರಿತು ವರದಿಗಳನ್ನು ನೀಡಲಾಗಿತ್ತು.
ಮಾನಸಿಕ ಅಸ್ವಸ್ಥವಾಗಿ ಚಿಕಿತ್ಸೆ ಪಡೆಯುತ್ತಿದ್ದ ಯೋಧ ಸತ್ಯಪ್ಪ ಭಾನುವಾರ ಪಂಜಾಬ್‍ನ ಅಮೃತಸರ ಅಟ್ಟಾರಿ ಗಡಿಯ ಖೇಸರ್ ಕ್ಯಾಂಪ್ ನಲ್ಲಿ ನಾಲ್ಕು ಯೋಧರ ಮೇಲೆ ಗುಂಡಿನ ದಾಳಿ ಮಾಡಿ ಸಾಯಿಸಿ ತಾನೂ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement