ಅಂತಾರಾಷ್ಟ್ರೀಯ ಮಹಿಳಾ ದಿನದಂದು ವಿಧಾನಸಭೆಗೆ ಕುದುರೆ ಸವಾರಿ ಮಾಡಿಕೊಂಡು ಬಂದ ಕಾಂಗ್ರೆಸ್‌ ಶಾಸಕಿ..! ವೀಕ್ಷಿಸಿ

ರಾಂಚಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಂಗಳವಾರ ಬೆಳಗ್ಗೆ ಜಾರ್ಖಂಡ್‌ನ ಕಾಂಗ್ರೆಸ್ ಶಾಸಕರೊಬ್ಬರು ಕುದುರೆ ಸವಾರಿ ಮಾಡಿ ವಿಧಾನಸಭೆಗೆ ಆಗಮಿಸಿದ್ದಾರೆ.
ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಬರ್ಕಗಾಂವ್ ವಿಧಾನಸಭಾ ಕ್ಷೇತ್ರದ ಶಾಸಕಿ ಅಂಬಾ ಪ್ರಸಾದ್ ಅವರು ರಾಜ್ಯ ವಿಧಾನಸಭೆಗೆ ಕುದುರೆ ಮೇಲೆ ಆಗಮಿಸಿ ವಿಧಾನಸಭೆಯ ಹೊರಗೆ ಎಲ್ಲರ ಗಮನ ಸೆಳೆದರು.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕಿ ಅಂಬಾ ಪ್ರಸಾದ್, ಈ ಕುದುರೆಯನ್ನು ನನಗೆ ಸೇನೆಯ ನಿವೃತ್ತ ಅಧಿಕಾರಿ ರವಿ ರಾಥೋಡ್ ಅವರು ಅಂತರಾಷ್ಟ್ರೀಯ ಮಹಿಳಾ ದಿನಚರಣೆಯ ಪ್ರಯುಕ್ತ ಕೊಡುಗೆಯಾಗಿ ನೀಡಿದ್ದಾರೆ ಎಂದರು.

ಎಲ್ಲಾ ಸಾಮಾಜಿಕ, ಆರ್ಥಿಕ, ರಾಜಕೀಯ ಕ್ಷೇತ್ರಗಳಲ್ಲಿ 50% ಮಹಿಳೆಯರ ಭಾಗವಹಿಸುವಿಕೆಯೊಂದಿಗೆ, ದೇಶ ಮತ್ತು ರಾಜ್ಯವು ತಮ್ಮ ಸಾಮರ್ಥ್ಯವನ್ನು 100%ರಷ್ಟು ಸಾಧಿಸಬಹುದು. ಈ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸೋಣ. ನೀವು ಗಂಡುಮಕ್ಕಳಿಗೆ ಕೊಡುವ ಅಧಿಕಾರವನ್ನು ಹೆಣ್ಣುಮಕ್ಕಳಿಗೂ ನೀಡಿ,” ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಪ್ರತಿಯೊಬ್ಬ ಮಹಿಳೆಯಲ್ಲೂ ದುರ್ಗಾ, ಝಾನ್ಸಿ ಕಿ ರಾಣಿ ಇದ್ದಾಳೆ, ಪ್ರತಿ ಸವಾಲನ್ನು ಶಕ್ತಿಯಿಂದ ಎದುರಿಸಬೇಕು. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಪೋಷಕರು ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬೇಕು ಎಂದು ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ 2022 ರ ಧ್ಯೇಯವಾಕ್ಯ “ಪಕ್ಷಪಾತವನ್ನು ಮುರಿಯಿರಿ” ಎಂಬುದಾಗಿದೆ. “

ಓದಿರಿ :-   ಈ ಯೋಜನೆಯ ಎಲ್​ಪಿಜಿ ಸಿಲಿಂಡರ್​ಗೆ 200 ರೂ. ಸಬ್ಸಿಡಿ ಘೋಷಿಸಿದ ಕೇಂದ್ರ ಸರ್ಕಾರ..!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ