ಉಕ್ರೇನ್‌ನಲ್ಲಿ ಸಾವಿಗೀಡಾದ ವಿದ್ಯಾರ್ಥಿ ನವೀನ್ ಮೃತದೇಹ ಪತ್ತೆ : ಸಿಎಂ ಬೊಮ್ಮಾಯಿ ಮಾಹಿತಿ

posted in: ರಾಜ್ಯ | 0

ಬೆಂಗಳೂರು: ಉಕ್ರೇನ್‌ನಲ್ಲಿ ಶೆಲ್‌ ದಾಳಿಯಿಂದ ಮೃತಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ವಿದ್ಯಾರ್ಥಿ ನವೀನ್ ಮೃತದೇಹ ಸಿಕ್ಕಿದೆ. ಉಕ್ರೇನಿನ ಶವಾಗಾರದಲ್ಲಿ ನವೀನ್‍ನ ಮೃತ ದೇಹ ಇಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ನವೀನ್ ಮೃತ ದೇಹವನ್ನು ತರುವ ಬಗ್ಗೆ ಕೇಂದ್ರ ಸಚಿವ ಜೈಶಂಕರ್ ಅವರ ಜೊತೆಯಲ್ಲಿ ಮಾತಾಡಿದ್ದೇನೆ. ಉಕ್ರೇನಿನ ಶವಾಗಾರಗಳ ಅಧಿಕಾರಿಗಳ ಜೊತೆಗೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ನಾವು ರಾಯಭಾರಿ ಕಚೇರಿ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದೇವೆ. ಮೃತದೇಹ ತರುವ ಬಗ್ಗೆ ಸರ್ವ ಪ್ರಯತ್ನವನ್ನೂ ಮಾಡುತ್ತೇವೆ ಎಂದು ತಿಳಿಸಿದರು.
ಉಕ್ರೇನ್‍ನಲ್ಲಿ ಶೆಲ್ ದಾಳಿ ಇನ್ನೂ ನಡೆಯುತ್ತಿದೆ. ಅದು ನಿಂತ ಮೇಲೆ ಮೃತ ದೇಹ ತರುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ...!
advertisement

ನಿಮ್ಮ ಕಾಮೆಂಟ್ ಬರೆಯಿರಿ