ಗ್ರಾಪಂ, ತಾಪಂ, ಜಿಪಂ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೆ ಚಿಂತನೆ: ಸಚಿವ ಈಶ್ವರಪ್ಪ

ಬೆಂಗಳೂರು: ಸರ್ಕಾರ ಈಗ ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳ ವೇತನ ಹೆಚ್ಚಳಕ್ಕೂ ಚಿಂತನೆ ನಡೆಸಿದೆ.
ಈ ಕುರಿತು ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಮತ್ತು ಜಿಲ್ಲಾ ಪಂಚಾಯತ ಪ್ರತಿನಿಧಿಗಳ ವೇತನ ಹೆಚ್ಚಳ ಸಂಬಂಧ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಸ್ಥಳೀಯ ಸಂಸ್ಥೆ ಜನಪ್ರತಿನಿಧಿಗಳಿಗೆ ವೇತನ ಹೆಚ್ಚಳ ಮಾಡುವುದಕ್ಕೆ, ಆರೋಗ್ಯ ವಿಮೆ ನೀಡುವುದಕ್ಕೆ ಇಲಾಖೆಯಲ್ಲಿ ಅವಕಾಶ ಇದೆ. ಈಗ ಇರುವ ವೇತನ ಮತ್ತು ಎಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡಬಹುದು ಎಂಬುದರ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಕೂಲಂಕಷ ಚರ್ಚೆ ಮಾಡಲಾಗುವುದು ಎಂದು ಹೇಳಿದರು.

ಈ ಸಂಬಂಧ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾಗಿ ಬಂದಿರುವ ವಿಧಾನ ಪರಿಷತ್ ಸದಸ್ಯರ ಅಭಿಪ್ರಾಯವನ್ನೂ ಪಡೆಯಲಾಗುವುದು. ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ವೇತನ ಹೆಚ್ಚಳದ ಬಗ್ಗೆ ಅಂತಿಮಗೊಳಿಸಲಾಗುವುದು ಎಂದು ಈಶ್ವರಪ್ಪ ಹೇಳಿದರು.
ಅಲ್ಲದೆ, ಪಶ್ಚಿಮ ಬಂಗಾಳ ಮತ್ತು ಕೇರಳ ರಾಜ್ಯಗಳಿಗೆ ಅಧಿಕಾರಿಗಳ ನಿಯೋಗ ಕಳುಹಿಸಿ ಆ ರಾಜ್ಯಗಳಲ್ಲಿ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳಿಗೆ ಸಿಗುತ್ತಿರುವ ವೇತನ ಮತ್ತು ಸವಲತ್ತುಗಳ ಬಗ್ಗೆ ವರದಿ ಪಡೆದು ನಮ್ಮಲ್ಲಿ ಅದನ್ನು ಯಾವ ಪ್ರಮಾಣದಲ್ಲಿ ಪ್ರಮಾಣದಲ್ಲಿ ಅಳವಡಿಸಿಕೊಳ್ಳಬಹದು ಎಂಬುದರ ಬಗ್ಗೆ ಆಲೋಚಿಸಲಾಗುವುದು ಎಂದರು.

ಪ್ರಮುಖ ಸುದ್ದಿ :-   ಕೆಎಸ್​ಆರ್​ಟಿಸಿ ಬಸ್​ನಲ್ಲಿ ಅಜ್ಜಿ ಮೊಮ್ಮಗಳಿಗೆ ಉಚಿತ ಟಿಕೆಟ್ : ಆದ್ರೆ ನಾಲ್ಕು ಪಕ್ಷಿಗಳಿಗೆ 444 ರೂ. ಟಿಕೆಟ್...!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement