ಬೆಂಗಳೂರು: ಸ್ನೇಹ ಸೇತು 2022′ ಕಾರ್ಯಕ್ರಮ ಉದ್ಘಾಟನೆ

posted in: ರಾಜ್ಯ | 0

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಉತ್ತರ ಕನ್ನಡ ಸಂಘದ ‘ಸ್ನೇಹ ಸೇತು 2022’ ಕಾರ್ಯಕ್ರಮ ಸಂಘದ ಸ್ವಂತ ಕಟ್ಟಡ ‘ಉತ್ತರ ಕನ್ನಡ ಭವನ’ದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ಡಾ. ಜಿ ಎಲ್ ಹೆಗಡೆ ‘ಸದಸ್ಯತ್ವ ಅಭಿಯಾನ ಕಾರ್ಯಕ್ರಮ’ ಉದ್ಘಾಟಿಸಿದರು.

ಶ್ರೀ ಚೌಡೇಶ್ವರಿ ದೇವಸ್ಥಾನದ ವ್ಯವಸ್ಥಾಪಕ ಧರ್ಮದರ್ಶಿ ಶ್ರೀ ಅನಂತರಾಮ ದಂಪತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷರಾದ ಅರವಿಂದ ನಾಯಕ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಂತರ ಉತ್ತರ ಕನ್ನಡ ಜಿಲ್ಲೆಯ ಕಲಾವಿದರಿಂದ ‘ಚಿತ್ರಾಕ್ಷಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ ನಡೆಯಿತು. ಸಂಘದ ಪದಾಧಿಕಾರಿಗಳು. ಕಾರ್ಯಕಾರಿಣಿ ಸದಸ್ಯರು ಹಾಗೂ ಎಲ್ಲ ಸದಸ್ಯರು ಉಪಸ್ಥಿತರಿದ್ದರು. ಉತ್ತರ ಕನ್ನಡ ಜಿಲ್ಲೆಯ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬಿಂಬಿಸುವ ಕಾರ್ಯಕ್ರಮ ನಡೆಯಿತು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ಓದಿರಿ :-   ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ
advertisement

ನಿಮ್ಮ ಕಾಮೆಂಟ್ ಬರೆಯಿರಿ