ಶಿಕ್ಷಕರಾಗುವವರಿಗೆ ಗುಡ್‌ ನ್ಯೂಸ್‌…ಇನ್ಮುಂದೆ ವರ್ಷದಲ್ಲಿ ಎರಡು ಬಾರಿ ಟಿಇಟಿ ಪರೀಕ್ಷೆ

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವರ್ಷಕ್ಕೆ 2 ಬಾರಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೆಜ್ಜೆ ಇಟ್ಟಿದೆ.

ಈ ಕುರಿತು ಶಿಕ್ಷಣ ಇಲಾಖೆ ಪ್ರತಿ ವರ್ಷ 2 ಬಾರಿ ಶಿಕ್ಷಕರ ಅರ್ಹಾ ಪರೀಕ್ಷೆ (ಟಿಇಟಿ) ಪರೀಕ್ಷೆ ನಡೆಸಲು ಸೂಚಿಸಿದೆ. ಈ ಕುರಿತು ಪ್ರಾಥಮಿ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಪ್ರಸ್ತುತ ಚಾಲನೆಯಲ್ಲಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ( 6-8ನೇ ತರಗತಿ) ನೇಮಕಾತಿ ಪರೀಕ್ಷೆಯನ್ನು ಮೇ-2022ರಲ್ಲಿ ನಡೆಸಲು ಮತ್ತು 2023ನೇ ಸಾಲಿನಿಂದ ಟಿಇಟಿ ಯನ್ನು ವರ್ಷಕ್ಕೆ ಎರಡು ಬಾರಿ ನಡೆಸಲು ಸೂಚಿಸಲಾಗಿದೆ. ಜನವರಿ ಹಾಗೂ ಜೂನ್ ತಿಂಗಳಿನಲ್ಲಿ ವರ್ಷಕ್ಕೆ ಎರಡು ಪರೀಕ್ಷೆಗಳನ್ನು ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement