ಕರ್ನಾಟಕ ಮೇಕೆದಾಟು ಅಣೆಕಟ್ಟು ಕಟ್ಟಲು ತಮಿಳುನಾಡು ಬಿಡುವುದಿಲ್ಲ: ಸಚಿವ

posted in: ರಾಜ್ಯ | 0

ಚೆನ್ನೈ: ಮೇಕೆದಾಟು ಅಣೆಕಟ್ಟು ಕಟ್ಟಲು ಕರ್ನಾಟಕಕ್ಕೆ ತಮಿಳುನಾಡು ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ಎಸ್.ದುರೈಮುರುಗನ್ ಹೇಳಿದ್ದಾರೆ.
ಮೇಕೆದಾಟು ಎಂಬಲ್ಲಿ ಅಣೆಕಟ್ಟು ನಿರ್ಮಿಸುವುದರಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಯುವುದಕ್ಕೆ ತಡೆ ಉಂಟಾಗುತ್ತದೆ ಎಂದು ಡಿಎಂಕೆ ಹಿರಿಯ ನಾಯಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ತನ್ನ ಬಜೆಟ್ ಅನ್ನು 1,000 ಕೋಟಿಯಿಂದ 5,000 ಕೋಟಿಗೆ ಹೆಚ್ಚಿಸಿದರೂ, ತಮಿಳುನಾಡಿನ ಜನರು ಅದರ ನಿರ್ಮಾಣಕ್ಕೆ ಒಂದು ಇಟ್ಟಿಗೆ ಇಡಲು ಬಿಡುವುದಿಲ್ಲ. ಅಣೆಕಟ್ಟು ನಿರ್ಮಾಣವನ್ನು ತಡೆಯಲು ಲಭ್ಯವಿರುವ ಎಲ್ಲಾ ಕಾನೂನು ಮಾರ್ಗಗಳನ್ನು ತಮಿಳೂನಾಡು ಪರಿಗಣಿಸುತ್ತದೆ ಎಂದು ಅವರು ಹೇಳಿದ್ದಾರೆ.
ಕಾವೇರಿ ಜಲವಿವಾದಗಳ ನ್ಯಾಯಮಂಡಳಿ (ಸಿಡಬ್ಲ್ಯೂಡಿಟಿ) ನದಿಯ ಮೇಲ್ಭಾಗದ ರಾಜ್ಯವು ಅಂತಾರಾಜ್ಯ ನದಿಯ ನೀರಿನ ಮೇಲೆ ಸಂಪೂರ್ಣ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸುವುದು CWDT ಹಾಗೂ ಸುಪ್ರೀಂ ಕೋರ್ಟ್‌ನ ತೀರ್ಪಿನ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ದುರೈಮುರುಗನ್ ಹೇಳಿದ್ದಾರೆ.

ಈ ಮಧ್ಯೆ, ಎಐಎಡಿಎಂಕೆ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಓ.ಪನ್ನೀರಸೆಲ್ವಂ ಅವರು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಸರ್ವಪಕ್ಷ ಸಭೆ ಕರೆಯುವಂತೆ ಆಗ್ರಹಿಸಿದ್ದಾರೆ.
ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬೇಕೆಂಬ ಕರ್ನಾಟಕದ ಮನವಿಯನ್ನು ತಿರಸ್ಕರಿಸುವಂತೆ ಕೇಂದ್ರವನ್ನು ಒತ್ತಾಯಿಸಿ ರಾಜ್ಯ ವಿಧಾನಸಭೆಯನ್ನು ಕರೆಯಲು ಮತ್ತು ನಿರ್ಣಯವನ್ನು ಅಂಗೀಕರಿಸುವಂತೆ ಅವರು ಮುಖ್ಯಮಂತ್ರಿಗಳಿಗೆ ಕರೆ ನೀಡಿದರು.
ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ, ಕರ್ನಾಟಕ ಮತ್ತು ತಮಿಳುನಾಡು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಕೇಂದ್ರ ಜಲಸಂಪನ್ಮೂಲ ಸಚಿವರ ಹೇಳಿಕೆ ಕಳವಳಕಾರಿಯಾಗಿದೆ ಎಂದು ಪನ್ನೀರಸೆಲ್ವಂ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನಂತೆ ಕರ್ನಾಟಕ ತಮಿಳುನಾಡಿಗೆ ನೀರು ಬಿಡುತ್ತಿಲ್ಲ ಮತ್ತು ಹೆಚ್ಚುವರಿ ನೀರು ಮಾತ್ರ ರಾಜ್ಯಕ್ಕೆ ತಲುಪುತ್ತಿದೆ ಎಂದು ಅವರು ಹೇಳಿದರು.

ಓದಿರಿ :-   ಇನ್ಫೋಸಿಸ್ ಮುಖ್ಯಸ್ಥರಾಗಿ ಮುಂದಿನ 5 ವರ್ಷಗಳ ವರೆಗೆ ಸಲೀಲ್ ಪರೇಖ್ ಮರುನೇಮಕ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ