ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಅರ್ಜಿ ಶುಲ್ಕ ಹೆಚ್ಚಳ

posted in: ರಾಜ್ಯ | 0

ಬೆಂಗಳೂರು: ಮೇ ತಿಂಗಳಲ್ಲಿ 15,000 ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಇಟಿ ಪರೀಕ್ಷೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳು ಗ್ರೀನ್‌ ಸಿಗ್ನಲ್‌ ನೀಡಿದ್ದು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಪರೀಕ್ಷೆಗೆ ಅರ್ಜಿ ಶುಲ್ಕ ದರವನ್ನು ಶೇ. 25ರಷ್ಟು ಹೆಚ್ಚಳ ಮಾಡಲಾಗಿದೆ.
ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಒಂದು ಹುದ್ದೆಗೆ 625 ರೂ.ಗಳು ಎಂದು ನಿಗದಿ ಮಾಡಲಾಗಿದೆ.
ಹಾಗೂ ಎರಡು ಹುದ್ದೆಗೆ 1,250 ರೂ., ಸಾಮಾನ್ಯ ಅಭ್ಯರ್ಥಿಗಳಿಗೆ ಒಂದು ಹುದ್ದೆಗೆ 1,250 ರೂ. ಹಾಗೂ ಎರಡು ಹುದ್ದೆಗೆ 2,500 ರೂ. ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ.
2019ರಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆಸಿದ್ದ ವೇಳೆ ಪರಿಶಿಷ್ಟ ಜಾತಿ ಮತ್ತು ಪಂಗಡ ಅಭ್ಯರ್ಥಿಗಳಿಗೆ ಒಂದು ಹುದ್ದೆಗೆ 500 ರೂ. ಹಾಗೂ ಎರಡು ಹುದ್ದೆಗೆ ಒಂದು ಸಾವಿರ ರೂ., ಸಾಮಾನ್ಯ ಅಭ್ಯರ್ಥಿಗಳಿಗೆ ಒಂದು ಹುದ್ದೆಗೆ 1,000 ರೂ. ಹಾಗೂ ಎರಡು ಹುದ್ದೆಗೆ 2,000 ರೂ.ಗಳ ಅರ್ಜಿ ಶುಲ್ಕ ನಿಗದಿ ಮಾಡಲಾಗಿತ್ತು.
ಪ್ರಸ್ತುತ ಸರ್ಕಾರವು 15,000 ಹುದ್ದೆಗಳ ಪರೀಕ್ಷಾ ಪ್ರಕ್ರಿಯೆ ನಡೆಸಲು ಸುಮಾರು 9 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. 2019ರ ದರದಂತೆ ಸರಕಾರವು ಅಭ್ಯರ್ಥಿಗಳಿಂದ ಶುಲ್ಕ ಪಾವತಿಸಿಕೊಂಡರೆ, 3 ಕೋಟಿ ರೂ. ಕೊರತೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಶೇ. 25ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
:

ಓದಿರಿ :-   ಶಿವಮೊಗ್ಗದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ತಾಯಿ...!

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ