ನವದೆಹಲಿ: ಉಕ್ರೇನ್-ರಷ್ಯಾ ಯುದ್ಧದ ಮಧ್ಯೆ, ‘ಆಪರೇಷನ್ ಗಂಗಾ’ ಅಡಿಯಲ್ಲಿ ಉಕ್ರೇನ್‌ನಿಂದ ತನ್ನ 9 ಪ್ರಜೆಗಳನ್ನು ರಕ್ಷಿಸಿದ್ದಕ್ಕಾಗಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ.
ಈ ಕಾರ್ಯಾಚರಣೆಯ ಅಡಿಯಲ್ಲಿ ನೇಪಾಳಿ, ಟ್ಯುನೀಷಿಯಾದ ವಿದ್ಯಾರ್ಥಿಗಳನ್ನು ಸಹ ರಕ್ಷಿಸಲಾಗಿದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ.ಈ ಹಿಂದೆ, ಯುದ್ಧ ಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಪಾಕಿಸ್ತಾನಿ ವಿದ್ಯಾರ್ಥಿಯನ್ನು ಭಾರತೀಯ ಅಧಿಕಾರಿಗಳು ರಕ್ಷಿಸಿದ ನಂತರ ವಿದ್ಯಾರ್ಥಿನಿಯು ಭಾರತದ ರಾಯಭಾರ ಕಚೇರಿ ಹಾಗೂ ಪ್ರಧಾನಿ ಮೋದಿಗೆ ಧನ್ಯವಾದ ಸಲ್ಲಿಸಿದ ವೀಡಿಯೊ ವೈರಲ್ ಆಗಿತ್ತು.
ಏತನ್ಮಧ್ಯೆ, ಉಕ್ರೇನ್‌ನ ಸುಮಿಯಿಂದ ಎಲ್ಲಾ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಎಂಇಎ ತಿಳಿಸಿದೆ.
ಉಕ್ರೇನ್‌ನ ನೆರೆಯ ದೇಶಗಳಿಂದ ಭಾರತೀಯ ನಾಗರಿಕರನ್ನು ರಕ್ಷಿಸಲು ‘ಆಪರೇಷನ್ ಗಂಗಾ’ ಅಡಿಯಲ್ಲಿ, ವಿಶೇಷ ವಿಮಾನಗಳ ಮೂಲಕ ಸುಮಾರು 18 ಸಾವಿರ ಭಾರತೀಯರನ್ನು ಮರಳಿ ಕರೆತರಲಾಗಿದೆ. ಈ ಸಂದರ್ಭದಲ್ಲಿ ಬೆಂಗಾವಲು ಪಡೆ 9 ಬಾಂಗ್ಲಾದೇಶದ ವಿದ್ಯಾರ್ಥಿಗಳನ್ನು ಹಾಗೂ ನೇಪಾಳದ ವಿದ್ಯಾರ್ಥಿಗಳನ್ನೂ ಸ್ಥಳಾಂತರಿಸಿದೆ. ಭಾರತೀಯರೊಂದಿಗೆ ಬಾಂಗ್ಲಾದೇಶದ ವಿದ್ಯಾರ್ಥಿಗಳನ್ನೂ ಸ್ಥಳಾಂತರಿಸಿದ್ದಕ್ಕೆ ಶೇಕ್ ಹಸೀನಾ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
ಉಕ್ರೇನ್‌ನ ನೆರೆಯ ದೇಶಗಳಿಂದ ವಿಶೇಷ ನಾಗರಿಕ ವಿಮಾನಗಳ ಮೂಲಕ 410 ಭಾರತೀಯರನ್ನು ಮಂಗಳವಾರ ಸುಸೇವಾದಿಂದ 2 ವಿಶೇಷ ನಾಗರಿಕ ವಿಮಾನಗಳ ಮೂಲಕ ಕರೆತರಲಾಯಿತು ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ನಿಮ್ಮ ಕಾಮೆಂಟ್ ಬರೆಯಿರಿ