ತಂದೆ ನೇಣಿಗೆ ಶರಣಾದ ಸುದ್ದಿ ಕೇಳಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಗ..

ಮಡಿಕೇರಿ : ತಂದೆ ಹಾಗೂ ಮಗ ಇಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ವಿರಾಜಪೇಟೆಯ ಬಿಳುಗುಂದ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಗ್ರಾಮದ ನಿವಾಸಿಗಳಾದ ತಂದೆ ಸುಬ್ಬಯ್ಯ (76) ಹಾಗೂ ಪುತ್ರ ಗಿರೀಶ್ (39) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಮಾ.7ರಂದು ಸಂಜೆ ಮಂಡಲ ಕಚೇರಿಗೆ ಹೋಗಿ ಬರುವುದಾಗಿ ತೆರಳಿದ್ದ ಸುಬ್ಬಯ್ಯ ತೋಟದ ಮಧ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಂದೆಯ ಆತ್ಮಹತ್ಯೆಯ ಸುದ್ದಿ ತಿಳಿದು ಮನನೊಂದ ಮಗ ಗಿರೀಶ್ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸುಬ್ಬಯ್ಯ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಗಿರೀಶ ಅವರು ಪತ್ನಿಯನ್ನು ತೊರೆದಿದ್ದರು ಹಾಗೂ ಈ ಕಾರಣಕ್ಕೆ ಮನೆಯಲ್ಲಿ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುಬ್ಬಯ್ಯ ಅವರ ಪತ್ನಿ ಕಾವೇರಮ್ಮ ಅವರು ನೀಡಿರುವ ದೂರಿನ ಹಿನ್ನೆಲೆಯಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement