ಕೃಷಿ ಯಂತ್ರ ಖರೀದಿಗೆ ನೀಡುತ್ತಿರುವ ಸಬ್ಸಿಡಿ ಶೇ.50ರಿಂದ 75%ಕ್ಕೆ ಏರಿಕೆ

posted in: ರಾಜ್ಯ | 0

ಬೆಂಗಳೂರು: ಸಾಮಾನ್ಯ ವರ್ಗದ ಜನರು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ನೀಡಲಾಗುತ್ತಿರುವ ಸಬ್ಸಿಡಿಯನ್ನು ಶೇ.50ರಿಂದ 75ಕ್ಕೆ ಏರಿಕೆ ಮಾಡಲು ಕೃಷಿ ಸಚಿವ ಬಿ.ಸಿ.ಪಾಟೀಲ ವಿಧಾನಸಭೆಗೆ ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಶಾಸಕ ಆನಂದ್ ಸಿದ್ದನ್ಯಾಮೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾನ್ಯವರ್ಗದ ಜನರು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಈವರೆಗೂ ಶೇ..50ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಇದನ್ನು ಶೇ.75ಕ್ಕೆ ಏರಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. ಅಂತಿಮವಾಗಿ ಮತ್ತೊಂದು ಬಾರಿ ಅಧಿಕಾರಿಗಳ ಜೊತೆ ಮತ್ತೊಮ್ಮೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕೇಂದ್ರ ಸರ್ಕಾರದಿಂದ ನಮಗೆ ಈ ಬಾರಿ ಹೆಚ್ಚಿನ ಅನುದಾನ ಸಿಕ್ಕಿಲ್ಲ. ರಾಜ್ಯ ಸರ್ಕಾರದ ಅನುದಾನದಲ್ಲೇ ನಾವು ಸಬ್ಸಿಡಿ ಕೊಡುತ್ತಿದ್ದೇವೆ. ಹಣಕಾಸಿನ ಲಭ್ಯತೆ ಮೇಲೆ ನಾವು ಹಂತ ಹಂತವಾಗಿ ಯಂತ್ರೋಪಕರಣಗಳ ಖರೀದಿಗೆ ಹಣ ಮಂಜೂರು ಮಾಡಲಾಗುವುದು ಎಂದು ಹೇಳಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳ ಅಂತ್ಯಕ್ರಿಯೆ

5 / 5. ಒಟ್ಟು ವೋಟುಗಳು 2

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement