ಗೋವಾ: ಬಿಜೆಪಿಗೆ ಮೂವರು ಪಕ್ಷೇತರರ ಬೆಂಬಲ ಘೋಷಣೆ, ಸರ್ಕಾರದ ರಚನೆ ಹಾದಿ ಸುಗಮ

ಪಣಜಿ: ಮೂವರು ಸ್ವತಂತ್ರ ಶಾಸಕರು ಕೇಸರಿ ಪಕ್ಷಕ್ಕೆ ಬೆಂಬಲ ಪತ್ರ ನೀಡಿದ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಕರಾವಳಿ ರಾಜ್ಯವಾದ ಗೋವಾದಲ್ಲಿ ಮತ್ತೊಮ್ಮೆ ತನ್ನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ.3 ಸ್ವತಂತ್ರ ಶಾಸಕರು ನಮಗೆ ಬೆಂಬಲ ಪತ್ರ ನೀಡಿದ್ದಾರೆ, ಹೀಗಾಗಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ’ ಎಂದು ಗೋವಾ ಬಿಜೆಪಿ ಅಧ್ಯಕ್ಷ ಸದಾನಂದ ಶೇಟ್ ತನವಡೆ ಹೇಳಿದ್ದಾರೆ.

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189

ನಾವು 20 ಸ್ಥಾನಗಳನ್ನು ಗೆದ್ದಿದ್ದೇವೆ. ಎಂಜಿಪಿ ಸಹ ನಮಗೆ ಬೆಂಬಲ ಪತ್ರವನ್ನು ನೀಡಿದೆ. 3 ಸ್ವತಂತ್ರ ಶಾಸಕರು ಸಹ ನಮಗೆ ಬೆಂಬಲ ನೀಡಿದ್ದಾರೆ. ಹಾಗಾಗಿ ನಾವು ಈಗ 20+3+2 =25 ಆಗಿದ್ದೇವೆ. ಹೆಚ್ಚಿನ ಅಭ್ಯರ್ಥಿಗಳು ನಮ್ಮೊಂದಿಗೆ ಸೇರುವ ಸಾಧ್ಯತೆಯಿದೆ. ಹಾಗಾಗಿ. ನಾವು ಸರ್ಕಾರ ರಚಿಸುತ್ತಿದ್ದೇವೆ ಎಂದು ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಗೋವಾ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಬಿಜೆಪಿ 20 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸೂಚನೆ ನೀಡಿದೆ.
40 ಸದಸ್ಯರ ಗೋವಾ ವಿಧಾನಸಭೆಯಲ್ಲಿ ಸರ್ಕಾರ ರಚನೆಗೆ 21 ಮತಗಳು ಬೇಕು. ಸದ್ಯ ಬಿಜೆಪಿ 20ಲ್ಲಿ ಮುನ್ನಡೆ ಸಾಧಿಸಿದ್ದರಿಂದ ಇದು ಹೀಗೆಯೇ ಮುಂದುವರಿದರೆ ಬಹುತಮಕ್ಕೆ ಇಬ್ಬರ ಕೊರತೆ ಎದುರಾಗಲಿದೆ. ಇದೆ ಬೆನ್ನಿಗೇ ಬಿಜೆಪಿ ಅಖಾಡಕ್ಕೆ ಇಳಿದಿದ್ದು, ಮೂವರು ಪಕ್ಷೇತರ ಸದಸ್ಯರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದು, ಸರ್ಕಾರ ರಚಿಸಲು ಬಿಜೆಪಿ ಹಾದಿ ಸುಗಮವಾದಂತಾಗಿದೆ.
ಬಿಚೊಲಿಮ್‌ ಕ್ಷೇತ್ರದ ಡಾ ಚಂದ್ರಕಾಂತ ಶೇಟಿ, ಕೊರ್ಟಲಿಮ್‌ ಕ್ಷೇತ್ರ ಮ್ಯಾನುಯೆಲ್‌ ವೇಜ್‌, ಕಾರ್ಟೊರಿಮ್‌ ಕ್ಷೇತ್ರದ ಅಲೆಕ್ಸೊ ರೆಜಿನಾಲ್ಡೊ ತಾವು ಬಿಜೆಪಿಗೆ ಬೆಂಬಲಿಸುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಬಿಜೆಪಿ ಸರ್ಕಾರ ರಚಿಸುವುದು ಬಹುತೇಕ ಖಾತ್ರಿಯಾದಂತಾಗಿದೆ.
ಸದ್ಯ ಗೋವಾದಲ್ಲಿ ಬಿಜೆಪಿ 20 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 12 ಕ್ಷೇತ್ರಗಳಲ್ಲಿ, ಎಎಪಿ 2 ಮತ್ತು ಇತತರರು ಏಳು ಕ್ಷೇತ್ರಗಳಲ್ಲಿ ಮುಂದಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಇಂದಿನ ಪ್ರಮುಖ ಸುದ್ದಿ :-   ಕಾರ್ಯಕ್ರಮದಲ್ಲೇ ಕೆಂಡಾಮಂಡಲವಾದ ಮಮತಾ ಬ್ಯಾನರ್ಜಿ : ಅಧಿಕಾರಿಗಳು ತೀವ್ರ ತರಾಟೆಗೆ-ಕಾರಣ ಇಲ್ಲಿದೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement