ಶ್ರೀನಗರ: ಶ್ರೀನಗರದ ಹೊರವಲಯದಲ್ಲಿ ಸರಪಂಚರೊಬ್ಬರನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಮೃತರನ್ನು ಸಮೀರ್ ಭಟ್ ಎಂದು ಗುರುತಿಸಲಾಗಿದ್ದು, ಇವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸರಪಂಚರಾಗಿದ್ದರು. ನಿಷೇಧಿತ ಉಗ್ರ ಸಂಘಟನೆ ಲಷ್ಕರ್ ಇ ತೈಬಾದ ಅಂಗಸಂಸ್ಥೆಯಾಗಿರುವ ದಿ ರೆಸಿಸ್ಟನ್ಸ್ ಫ್ರಂಟ್ (TRF) ಈ ದಾಳಿಯ ಹೊಣೆ ಹೊತ್ತುಕೊಂಡಿದೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಸಮೀರ್ ಭಟ್ ಅವರಿಗೆ ಉಗ್ರರಿಂದ ಬೆದರಿಕೆಯಿದ್ದ ಕಾರಣ ಅವರನ್ನ ಹೊಟೇಲ್ವೊಂದರಲ್ಲಿ ಇಟ್ಟು, ಭದ್ರತೆಯನ್ನು ಒದಗಿಸಲಾಗಿತ್ತು. ಆದರೆ ಅನಿವಾರ್ಯ ಕೆಲಸಕ್ಕಾಗಿ ಬುಧವಾರ ಅವರು ಅಲ್ಲಿಂದ ಹೊರಬೀಳಬೇಕಾಯಿತು. ಅದೂ ಕೂಡ ತುಂಬ ಮುನ್ನೆಚ್ಚರಿಕೆಯಿಂದ, ಗೌಪ್ಯವಾಗಿಯೇ ಹೊರಬಿದ್ದಿದ್ದರು. ಆದರೂ ಕೂಡ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಶ್ರೀನಗರದ ಹೊರವಲಯದಲ್ಲಿರುವ ಖೋನ್ಮೋಹ್ ಎಂಬಲ್ಲಿ ಉಗ್ರರು ಅವರಿಗೆ ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸರು ಸುತ್ತುವರಿದಿದ್ದಾರೆ. ಪರಿಶೀಲನೆ ನಡೆಸಲಾಗುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ