ಗೋವಾ ಚುನಾವಣಾ ಫಲಿತಾಂಶ: ಆಡಳಿತ ವಿರೋಧಿ ಅಲೆಯನ್ನೇ ಸೋಲಿಸಿದ ಬಿಜೆಪಿ, ಎರಡನೇ ಸ್ಥಾನಕ್ಕೆ ತಳ್ಳಲ್ಪಟ್ಟ ಕಾಂಗ್ರೆಸ್…!

ಪಣಜಿ: ಗೋವಾ ವಿಧಾನಸಭೆಯ 40 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆಯ ಕೊನೆಯಲ್ಲಿ ನೆಕ್‌ ಟು ನೆಕ್‌ ಹಣಾಹಣಿಯ ನಂತರ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಕೇಔಲ ಒಂದು ಸ್ಥಾನದಿಂದಾಗಿ ಸರಳ ಬಹುತಮದಿಂದ ವಂಚಿತವಾಗಿದೆ. ಆದರೆ ಕರಾವಳಿ ರಾಜ್ಯದಲ್ಲಿ ಸತತ ಮೂರನೇ ಸರ್ಕಾರವನ್ನು ರಚಿಸಲು ಸಿದ್ಧತೆ ನಡೆಸಿದೆ.
ಗೋವಾದಲ್ಲಿ ಸರ್ಕಾರ ರಚಿಸಲು ನಾವು ಮೂವರು ಸ್ವತಂತ್ರ ಅಭ್ಯರ್ಥಿಗಳು ಮತ್ತು ಇಬ್ಬರು ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷದ (ಎಂಜಿಪಿ) ಅಭ್ಯರ್ಥಿಗಳ ಬೆಂಬಲವನ್ನು ತೆಗೆದುಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹರೀಶ್ ವೋಲ್ವೊಯ್ಕರ್ ಹೇಳಿದ್ದಾರೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಎಂಜಿಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಎಲ್ಲಾ ಎಕ್ಸಿಟ್ ಪೋಲ್‌ಗಳು ಗೋವಾದಲ್ಲಿ ತಪ್ಪಾಗಿದೆ ಎಂದು ಫಲಿತಾಂಶದಲ್ಲಿ ಸಾಬೀತಾಗಿದೆ ಮತ್ತು ಗೋವಾದ ಜನರು ಸತತ ಮೂರನೇ ಬಾರಿಗೆ ನಮಗೆ ಸೇವೆ ಸಲ್ಲಿಸುವ ಅವಕಾಶವನ್ನು ನೀಡಿದ್ದಾರೆ” ಎಂದು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕಾಂಗ್ರೆಸ್ 11, ಗೋವಾ ಫಾರ್ವರ್ಡ್ ಪಾರ್ಟಿ 1, ಮಹಾರಾಷ್ಟ್ರವಾದಿ ಗೋನ್ಸ್ ಪಾರ್ಟಿ 2, ರೆವಲ್ಯೂಷನರಿ ಗೋನ್ಸ್ ಪಾರ್ಟಿ 1 ಮತ್ತು ಸ್ವತಂತ್ರರು ಮೂರು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಮುಖ ಸುದ್ದಿ :-   ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ : ಶೇ.95.6 ಅಂಕ ಗಳಿಸಿ ಅದ್ಭುತ ಸಾಧನೆ ಮಾಡಿದ ಆಸಿಡ್ ದಾಳಿಯಲ್ಲಿ ದೃಷ್ಟಿ ಕಳೆದುಕೊಂಡ ವಿದ್ಯಾರ್ಥಿನಿ..

2017 ಕ್ಕೆ ಹೋಲಿಸಿದರೆ, ಬಿಜೆಪಿಯು ಗೆದ್ದಿರುವ ಸ್ಥಾನಗಳ ಸಂಖ್ಯೆ ಗಮನಿಸಿದರೆ ಹೆಚ್ಚು ಲಾಭ ಗಳಿಸಿದೆ: 2017 ರಲ್ಲಿ 13 ಸ್ಥಾನಗಳಿಸಿದ್ದರೆ ಮತ್ತು 2022 ರಲ್ಲಿ 20 ಸ್ಥಾನಗಳಿಸಿದೆ. ಕಾಂಗ್ರೆಸ್ 2017 ರಲ್ಲಿ 17ರಲ್ಲಿ ಗೆಲುವು ಸಾಧಿಸಿತ್ತು. 2022 ರಲ್ಲಿ ಕೇವಲ 11 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಚುನಾವಣಾ ಆಯೋಗದ ಮಧ್ಯಂತರ ಅಂಕಿಅಂಶಗಳ ಪ್ರಕಾರ, ಬಿಜೆಪಿಯ ಮತಗಳ ಪ್ರಮಾಣವು 2017 ರಲ್ಲಿ 32% ರಿಂದ 2022 ರಲ್ಲಿ 33.3% ಕ್ಕೆ ಸ್ವಲ್ಪ ಹೆಚ್ಚಾಗಿದೆ. ಕಾಂಗ್ರೆಸ್ ತನ್ನ 2017 ರ ಶೇಕಡಾ 28 ರ ಮತಗಳಿಂದ ಶೇಕಡಾ ಐದು ಕುಸಿದು ಶೇ.23%ರಷ್ಟಕ್ಕೆ ಬಂದಿದೆ.
ರಾಜ್ಯದಲ್ಲಿ ಚುನಾವಣೆಗೆ ಪಾದಾರ್ಪಣೆ ಮಾಡಿದ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಶೇಕಡಾ ಐದಕ್ಕಿಂತ ಹೆಚ್ಚು ಮತಗಳನ್ನು ದಾಖಲಿಸಿದೆ. ಆಮ್ ಆದ್ಮಿ ಪಕ್ಷವು ಶೇಕಡ ಆರಕ್ಕಿಂತ ಸ್ವಲ್ಪ ಹೆಚ್ಚು ಮತ ಹಂಚಿಕೆಯನ್ನು ದಾಖಲಿಸಿದೆ. ಈ ಪಕ್ಷಗಳು ಹೆಚ್ಚಾಗಿ ಕಾಂಗ್ರೆಸ್‌ ಮತಗಳನ್ನೇ ಕಬಳಿಸಿದಂತೆ ಕಂಡುಬರುತ್ತಿದೆ. ಹೀಗಾಗಿ ಗೋವಾ ಗೆದ್ದು ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಕಾಂಗ್ರೆಸ್‌ ನಿರೀಕ್ಷೆ ಹುಸಿಯಾಗಿದೆ.

ಪ್ರಮುಖ ಸುದ್ದಿ :-   ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಕ್ಷಮೆಯಾಚಿಸಿದ ಮಧ್ಯಪ್ರದೇಶದ ಸಚಿವ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement