ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಬಿಎಸ್ ವೈ

posted in: ರಾಜ್ಯ | 0

ಬೆಂಗಳೂರು: ಪಂಚರಾಜ್ಯ ಚುನಾವಣೆ ಫಲಿತಾಂಶ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಕೇವಲ ಊಹಾಪೋಹ. ಬಸವರಾಜ ಬೊಮ್ಮಾಯಿ ಈ ಸರ್ಕಾರದ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದ್ದಾರೆ.
ಪಂಚ ರಾಜ್ಯಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಜಯಗಳಿಸಿದ್ದು ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಸಿಕ್ಕಿದ ಜಯವಾಗಿದೆ. ಮೋದಿ ಅವರ ನಾಯಕತ್ವ ಮತ್ತು ಬಿಜೆಪಿಯ ಹಮ್ಮಿಕೊಂಡ ಅಭಿವೃದ್ಧಿಕಾರ್ಯಗಳಿಗೆ ಜನರು ಬಿಜೆಪಿಗೆ ಮತ ನೀಡಿದ್ದಾರೆ. ಕರ್ನಾಟಕದಲ್ಲಿ ಮುಂದೆ ನಡೆಯುವ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಈ ಫಲಿತಾಂಶವಾಗಿದೆ ಎಂದು ಅಭಿಪ್ರಾಯಪಟ್ಟರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ
advertisement

ನಿಮ್ಮ ಕಾಮೆಂಟ್ ಬರೆಯಿರಿ