ಬ್ರಿಟಿಷ್ ಕೌನ್ಸಿಲ್ ಜೊತೆ 3 ವರ್ಷಗಳ ಒಡಂಬಡಿಕೆಗೆ ಉನ್ನತ ಶಿಕ್ಷಣ ಇಲಾಖೆ ಅಂಕಿತ

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶಗಳನ್ನು ತಂದುಕೊಡುವ ಮೂರು ವರ್ಷಗಳ ಒಡಂಬಡಿಕೆಗೆ ಕರ್ನಾಟಕ ಸರ್ಕಾರ ಮತ್ತು ಬ್ರಿಟಿಷ್ ಕೌನ್ಸಿಲ್ ಸಂಸ್ಥೆಗಳು ಶುಕ್ರವಾರ ಅಂಕಿತ ಹಾಕಿವೆ.
ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಪರವಾಗಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್ ಮತ್ತು ಬ್ರಿಟಿಷ್ ಕೌನ್ಸಿಲ್ ಪರವಾಗಿ ಆ ಸಂಸ್ಥೆಯ ದಕ್ಷಿಣ ಭಾರತ ಮಟ್ಟದ ನಿರ್ದೇಶಕ ಜನಕ ಪುಷ್ಪನಾಥನ್ ಒಡಂಬಡಿಕೆ ವಿನಿಮಯ ಮಾಡಿಕೊಂಡರು. ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಡಾ. ಅಶ್ವತ್ಥನಾರಾಯಣ ಮಾತನಾಡಿ, ಈ ಒಡಂಬಡಿಕೆಯು ರಾಜ್ಯದ ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣದ ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ, ಇಂಗ್ಲಿಷ್ ಕಲಿಕೆ ಮತ್ತು ಸಂಶೋಧನೆಗೆ ಅಗತ್ಯವಾದ ಶಿಸ್ತನ್ನು ಕಲಿಸಲಿದೆ. ಕರ್ನಾಟಕ ಮತ್ತು ಇಂಗ್ಲೆಂಡ್‍ನ ಶಿಕ್ಷಣ ಸಂಸ್ಥೆಗಳ ಜೊತೆ ವಿದ್ಯಾರ್ಥಿಗಳ ವಿನಿಮಯ (ಟ್ವಿನ್ನಿಂಗ್ ಕಾರ್ಯಕ್ರಮ), ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಶೈಕ್ಷಣಿಕ ನಾಯಕತ್ವ ಬೆಳೆಸುವ ವಿಷಯದಲ್ಲಿ ಒಪ್ಪಂದ ಗಮನಹರಿಸಲಿದೆ ಎಂದರು.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

ಬ್ರಿಟಿಷ್ ಕೌನ್ಸಿಲ್‍ನೊಂದಿಗೆ ಕಳೆದೊಂದು ದಶಕದಿಂದ ರಾಜ್ಯದ ಸಂಬಂಧ ಹಲವು ಪಟ್ಟು ಸುಧಾರಿಸಿದೆ. ಈ ಸಹಭಾಗಿತ್ವದ ಮೂಲಕ ರಾಜ್ಯದ ವಿ.ವಿ.ಗಳ ಪಠ್ಯಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಲಾಗಿದೆ. ಜೊತೆಗೆ, ಒಳ್ಳೆಯ ಉದ್ಯೋಗ ಸೃಷ್ಟಿಯಾಗುತ್ತಿವೆ ಎಂದು ಹೇಳಿದರು.
ಟಿಷ್ ಕೌನ್ಸಿಲ್ ನೊಂದಿಗೆ ಕಳೆದೊಂದು ದಶಕದಿಂದ ರಾಜ್ಯದ ಸಂಬಂಧ ಹಲವು ಪಟ್ಟು ಸುಧಾರಿಸಿದೆ. ಈ ಸಹಭಾಗಿತ್ವದ ಮೂಲಕ ರಾಜ್ಯದ ವಿ.ವಿ.ಗಳ ಪಠ್ಯಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸಲಾಗಿದೆ. ಜೊತೆಗೆ, ಒಳ್ಳೆಯ ಉದ್ಯೋಗ ಸೃಷ್ಟಿಯಾಗುತ್ತಿವೆ ಎಂದು ಅವರು ನುಡಿದರು.
ಯುನೈಟೆಡ್ ಕಿಂಗ್ಡಂ ಮತ್ತು ಭಾರತದ ನಡುವೆ ಶೈಕ್ಷಣಿಕ ಸಂಶೋಧನಾ ಉಪಕ್ರಮ ಮತ್ತು `ಗೋಯಿಂಗ್ ಗ್ಲೋಬಲ್’ ಕಾರ್ಯಕ್ರಮಗಳ ಮೂಲಕ ಈ ಸಹಭಾಗಿತ್ವವನ್ನು ಇನ್ನಷ್ಟು ವಿಸ್ತರಿಸಲಾಗುವುದು. ಮುಖ್ಯವಾಗಿ ಐಟಿಐ, ಎಂಜಿನಿಯರಿಂಗ್ ಮತ್ತು ವ್ಯವಸ್ಥಾಪನಾ ವಿಜ್ಞಾನ (ಮ್ಯಾನೇಜ್ಮೆಂಟ್ ಕೋರ್ಸಸ್)ಗಳನ್ನು ಓದುತ್ತಿರುವವರಿಗೆ ಅಪಾರ ಲಾಭವಾಗಲಿದೆ. ಕರ್ನಾಟಕದ ವಿದ್ಯಾರ್ಥಿಗಳಿಗೆ ಇಂಗ್ಲೆಂಡಿನ ವಿಶ್ವವಿದ್ಯಾಲಯಗಳಲ್ಲಿ ಉನ್ನತಾಧ್ಯಯನಕ್ಕೆ ವಕಾಶವಾಗಲಿದೆ. ರಾಜ್ಯದ ವಿದ್ಯಾರ್ಥಿಗಳು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಮಶೀನ್ ಲರ್ನಿಂಗ್, ಎಡ್-ಟೆಕ್, ಜೀವವಿಜ್ಞಾನಗಳು ಮತ್ತು ಸೈಬರ್ ಸೆಕ್ಯುರಿಟಿಯಂತಹ ಅತ್ಯಾಧುನಿಕ ಕೋರ್ಸುಗಳನ್ನು ಕಲಿಯಬಹುದು ಎಂದು ಅಶ್ವತ್ಥನಾರಾಯಣ ತಿಳಿಸಿದರು.

ಪ್ರಮುಖ ಸುದ್ದಿ :-   ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೇನೆ ಎಂದ ಕೊಲೆ ಆರೋಪಿ ಫಯಾಜ್‌ ತಂದೆ

ಇಂಗ್ಲೆಂಡ್ ಸರ್ಕಾರದ ಅಂತಾರಾಷ್ಟ್ರೀಯ ಶಿಕ್ಷಣ ತಜ್ಞ ಸರ್ ಸ್ಟೀವ್ ಸ್ಮಿತ್ ಮಾತನಾಡಿ, ಈ ವರ್ಷದ ಮೇ ತಿಂಗಳಲ್ಲಿ ಇಂಗ್ಲೆಂಡಿನಲ್ಲಿ ನಡೆಯಲಿರುವ `ವಿಶ್ವ ಶಿಕ್ಷಣ ಒಕ್ಕೂಟ’ದ ಸಮಾವೇಶಕ್ಕೆ ಸಚಿವರನ್ನು ಆಹ್ವಾನಿಸಿದರು. ರಾಜ್ಯದಿಂದ ಉನ್ನತ ಶಿಕ್ಷಣ ಸಚಿವರ ನೇತೃತ್ವದಲ್ಲಿ ತೆರಳಲಿರುವ ನಿಯೋಗದಲ್ಲಿ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪ್ರತಿನಿಧಿಗಳು, ಹಲವು ವಿ.ವಿ.ಗಳ ಕುಲಪತಿಗಳು ಮತ್ತು ಇಲಾಖೆಯ ಕೆಲವು ಉನ್ನತಾಧಿಕಾರಿಗಳು ಇರಲಿದ್ದಾರೆ.
ಬ್ರಿಟಿಷ್ ಕೌನ್ಸಿಲ್ ಸಂಸ್ಥೆಯ ದಕ್ಷಿಣ ಏಷ್ಯಾ ಪ್ರಾದೇಶಿಕ ನಿರ್ದೇಶಕ ಆಡ್ರಿಯನ್ ಚಾಡ್ವಿಕ್, ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ, ಆಡಳಿತಾಧಿಕಾರಿ ಡಾ.ತಾಂಡವಗೌಡ ಮೊದಲಾದವರಿದ್ದರು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement