ನವದೆಹಲಿ: ಮಣಿಪುರ, ಪಂಜಾಬ್, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಗೋವಾ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ನಿರಾಸೆಗೊಂಡಿರುವ ಕಾಂಗ್ರೆಸ್‌ನ 23 ನಾಯಕರ ಗುಂಪು (ಜಿ-23) ಮುಂದಿನ 48 ಗಂಟೆಗಳಲ್ಲಿ ಸಭೆ ನಡೆಸಲಿದೆ ಎಂದು ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
“ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಫಲಿತಾಂಶಗಳು ಮತ್ತು ಕಾಂಗ್ರೆಸ್‌ನ ಕ್ಷಿಪ್ರ ಕುಸಿತದಿಂದ ಅಸಮಾಧಾನಗೊಂಡಿರುವ ಜಿ -23 ನಾಯಕರು ಮುಂದಿನ 48 ಗಂಟೆಗಳಲ್ಲಿ ಸಭೆ ಸೇರಲಿದ್ದಾರೆ” ಎಂದು ಹೆಸರು ಹೇಳಲು ಇಚ್ಛಿಸದ ನಾಯಕರೊಬ್ಬರು ತಿಳಿಸಿದ್ದಾರೆ.
ಕಾಂಗ್ರೆಸ್ ಪಂಜಾಬ್ ಅನ್ನು ಕಳೆದುಕೊಂಡಿತು ಮತ್ತು ಗೋವಾ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಮಣಿಪುರದಲ್ಲಿ ಅದಕ್ಕೆ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಫಲಿತಾಂಶಗಳ ಆತ್ಮಾವಲೋಕನಕ್ಕಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನು ಶೀಘ್ರದಲ್ಲೇ ಕರೆಯಲು ಪಕ್ಷ ನಿರ್ಧರಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಗುರುವಾರ ಹೇಳಿದ್ದಾರೆ.
ಐದು ರಾಜ್ಯಗಳ ಫಲಿತಾಂಶವು ಕಾಂಗ್ರೆಸ್ ಪಕ್ಷದ ನಿರೀಕ್ಷೆಗೆ ವಿರುದ್ಧವಾಗಿದೆ. ನಾವು ಜನರ ಆಶೀರ್ವಾದವನ್ನು ಪಡೆಯುವಲ್ಲಿ ವಿಫಲರಾಗಿದ್ದೇವೆ ಎಂಬುದನ್ನು ನಾವು ಒಪ್ಪಿಕೊಳ್ಳುತ್ತೇವೆ. ಫಲಿತಾಂಶಗಳ ಆತ್ಮಾವಲೋಕನಕ್ಕಾಗಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯನ್ನು ಶೀಘ್ರದಲ್ಲೇ ಕರೆಯಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ” ಎಂದು ಸುರ್ಜೇವಾಲಾ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಚುನಾವಣಾ ಫಲಿತಾಂಶಗಳ ಟ್ರೆಂಡ್‌ಗಳ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಜನರ ತೀರ್ಪನ್ನು ವಿನಮ್ರವಾಗಿ ಸ್ವೀಕರಿಸುತ್ತೇನೆ ಮತ್ತು ಪಕ್ಷವು ಅದರಿಂದ ಪಾಠ ಕಲಿಯುತ್ತದೆ ಎಂದು ಹೇಳಿದ್ದಾರೆ.
ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶವನ್ನು ಗೆದ್ದವರಿಗೆ ಶುಭಾಶಯಗಳು. ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು. ನಾವು ಇದರಿಂದ ಪಾಠ ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಪ್ರಮುಖವಾಗಿ, ಜಿ-23 ಕಾಂಗ್ರೆಸ್‌ನ ಪ್ರಮುಖ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಮನೀಶ್ ತಿವಾರಿ ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದಿರಲಿಲ್ಲ.
ನಿಮ್ಮ ಕಾಮೆಂಟ್ ಬರೆಯಿರಿ