ವಸತಿ ಯೋಜನೆ ಆದಾಯ ಮಿತಿ ಹೆಚ್ಚಳಕ್ಕೆ ಕ್ರಮ: ಸಚಿವ ಸೋಮಣ್ಣ

ಬೆಂಗಳೂರು: ರಾಜ್ಯದ ವಸತಿ ಯೋಜನೆಗಳ ಫಲಾನುಭವಿಗಳಿಗೆ ನಿಗದಿಪಡಿಸಿರುವ ಆದಾಯದ ಮಿತಿಯನ್ನು ಹೆಚ್ಚಳ ಮಾಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ವಿಧಾನಸಭೆಯಲ್ಲಿ ಇಂದು, ಶುಕ್ರವಾರ ಹೇಳಿದರು.

ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ರಮೇಶ್ ಕುಮಾರ್ ಾವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ವಸತಿ ಯೋಜನೆಗಳಿಗೆ ಫಲಾನುಭವಿಗಳಾಗಲು ಪ್ರಸ್ತುತ 32 ಸಾವಿರ ರೂ.ಗಳ ವಾರ್ಷಿಕ ಆದಾಯ ನಿಗದಿ ಮಾಡಲಾಗಿದ್ದು, ಇದು ಅವೈಜ್ಞಾನಿಕ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡುದಾರರಿಗೆ ನಿಗದಿಪಡಿಸಿರುವ 1.20 ಲಕ್ಷ ರೂ.ಗಳ ಆದಾಯ ಮಿತಿಯನ್ನು ವಸತಿ ಯೋಜನೆಗಳಿಗೂ ನಿಗದಿ ಮಾಡಲಾಗುವುದು. ಇದನ್ನು ಮುಖ್ಯಮಂತ್ರಿಗಳು ಬಜೆಟ್ ಮೇಲೆ ಉತ್ತರದ ನೀಡುವ ಸಂದರ್ಭದಲ್ಲಿ ಹೇಳುತ್ತಾರೆ ಎಂದರು.

ನಗರ ಪ್ರದೇಶಗಳಲ್ಲೂ ವಸತಿ ಯೋಜನೆಗಳ ಫಲಾನುಭವಿಗಳಿಗೆ ನಿಗದಿ ಮಾಡಿರುವ ವಾರ್ಷಿಕ ಆದಾಯ 87 ಸಾವಿರ ರೂ.ಗಳನ್ನು 3 ಲಕ್ಷ ರೂ.ಗಳ ವರೆಗೂ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ್ದ ರಮೇಶ್‌ಕುಮಾರ್ ಅವರು, ವಸತಿ ಯೋಜುನೆಗಳಿಗೆ 32 ಸಾವಿರ ರೂ. ಆದಾಯ ಮಿತಿ ನಿಗದಿಯಾಗಿದೆ. ಆದರೆ, ಕಂದಾಯ ಇಲಾಖೆಯವರು 45 ಸಾವಿರ ರೂ.ಗಳಿಗಿಂತ ಕಡಿಮೆ ಆದಾಯ ಪ್ರಮಾಣ ಪತ್ರಗಳನ್ನು ನೀಡುವುದಿಲ್ಲ. ಹೀಗಾಗಿ ಇದನ್ನು ಸರಿಪಡಿಸಿ. ಇಲ್ಲದಿದ್ದರೆ ಫಲಾನುಭವಿಗಳಿಗೆ ತೊಂದರೆಯಾಗುತ್ತದೆ ಎಂದು ಸರ್ಕಾರದ ಗಮನ ಸೆಳೆದಿದ್ದರು.

ಪ್ರಮುಖ ಸುದ್ದಿ :-   ಐಟಿ ಅಧಿಕಾರಿಗಳ ದಾಳಿ, ಕಲಬುರಗಿ ರೈಲ್ವೆ ನಿಲ್ದಾಣದ ಬಳಿ ಕಾರಿನಲ್ಲಿದ್ದ 2 ಕೋಟಿ ರೂ. ವಶಕ್ಕೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement