ಪಾಕಿಸ್ಥಾನಕ್ಕೆ ‘ಆಕಸ್ಮಿಕ’ವಾಗಿ ಕ್ಷಿಪಣಿ ಉಡಾವಣೆ : ಭಾರತದ ರಕ್ಷಣಾ ಸಚಿವಾಲಯ ವಿಷಾದ, ತನಿಖೆಗೆ ಆದೇಶ

ನವದೆಹಲಿ: ಬುಧವಾರ ಪಾಕಿಸ್ತಾನದೊಳಗೆ (Pakistan) ಶಸ್ತ್ರರಹಿತ ಭಾರತೀಯ ಸೂಪರ್‌ಸಾನಿಕ್ ಕ್ಷಿಪಣಿ ಬಿದ್ದ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಭಾರತ ಸರ್ಕಾರ, ಇದು ಆಕಸ್ಮಿಕವಾಗಿ ಉಡಾವಣೆ ಆಗಿದ್ದು ಎಂದು ವಿಷಾದ ವ್ಯಕ್ತಪಡಿಸಿದೆ. ಇದೇ ವೇಳೆ ಈ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.

ಮಾರ್ಚ್ 9 ರಂದು ವಾಡಿಕೆಯ ನಿರ್ವಹಣೆಯ ಸಂದರ್ಭದಲ್ಲಿ, ತಾಂತ್ರಿಕ ದೋಷದಿಂದಾಗಿ ಆಕಸ್ಮಿಕವಾಗಿ ಕ್ಷಿಪಣಿ ಉಡಾವಣೆ ಆಗಿತ್ತು” ಎಂದು ರಕ್ಷಣಾ ಸಚಿವಾಲಯ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ. ಭಾರತ ಸರ್ಕಾರವು “ಗಂಭೀರವಾಗಿ ಇದನ್ನು ತೆಗೆದುಕೊಂಡಿದೆ ಮತ್ತು ಉನ್ನತ ಮಟ್ಟದ ವಿಚಾರಣೆಗೆ ಆದೇಶಿಸಿದೆ” ಎಂದು ಹೇಳಿದೆ. ಕ್ಷಿಪಣಿ ಪಾಕಿಸ್ತಾನದ ಪ್ರದೇಶದಲ್ಲಿ ಬಿದ್ದಿದೆ ಎಂದು ತಿಳಿದುಬಂದಿದೆ. ಘಟನೆಯು ತೀವ್ರ ವಿಷಾದನೀಯವಾಗಿದ್ದರೂ, ಅಪಘಾತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನದ ವಿಷಯವಾಗಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪಾಕಿಸ್ತಾನದೊಳಗೆ (Pakistan) ಶಸ್ತ್ರರಹಿತ ಭಾರತೀಯ ಸೂಪರ್‌ಸಾನಿಕ್ ಕ್ಷಿಪಣಿ ಬಿದ್ದ ಘಟನೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಶುಕ್ರವಾರ ಭಾರತೀಯ ರಾಯಭಾರ ಕಚೇರಿಗೆ ಕರೆ ಮಾಡಿದ್ದು ತನ್ನ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ. ಈ ಘಟನೆಯ ಬಗ್ಗೆ ಪಾರದರ್ಶಕ ತನಿಖೆಗೆ ಪಾಕ್ ಒತ್ತಾಯಿಸಿದೆ.
ಫ್ಲೈಯಿಂಗ್ ಆಬ್ಜೆಕ್ಟ್ ವಿವೇಚನೆಯಿಲ್ಲದ ಉಡಾವಣೆಯು ನಾಗರಿಕ ಆಸ್ತಿಗೆ ಹಾನಿಯನ್ನುಂಟುಮಾಡುತ್ತದೆ ಮಾತ್ರವಲ್ಲದೆ ನೆಲದ ಮೇಲೆ ಮಾನವ ಜೀವಗಳನ್ನು ಅಪಾಯಕ್ಕೆ ಒಳಪಡಿಸುತ್ತದೆ ಎಂದು ಭಾರತೀಯ ರಾಜತಾಂತ್ರಿಕರಿಗೆ ತಿಳಿಸಲಾಗಿದೆ” ಎಂದು ಪಾಕಿಸ್ತಾನದ ವಿದೇಶಾಂಗ ಕಚೇರಿ (ಎಫ್ಒ) ತಿಳಿಸಿದೆ.
ಇಂತಹ ನಿರ್ಲಕ್ಷ್ಯದ ಅಹಿತಕರ ಪರಿಣಾಮಗಳ ಬಗ್ಗೆ ಎಚ್ಚರದಿಂದಿರಬೇಕು ಮತ್ತು ಭವಿಷ್ಯದಲ್ಲಿ ಇಂತಹ ಉಲ್ಲಂಘನೆಗಳು ಮರುಕಳಿಸುವುದನ್ನು ತಪ್ಪಿಸಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ಭಾರತಕ್ಕೆ ಎಚ್ಚರಿಕೆ ನೀಡಿದೆ ಎಂದು ಪಾಕಿಸ್ತಾನದ ಸೇನೆ ಹೇಳಿತ್ತು.

ಪ್ರಮುಖ ಸುದ್ದಿ :-   ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಯನ್ನು ಹೊರಹಾಕಿದ ಭಾರತ; 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ

ಭಾರತೀಯ ಸೂಪರ್‌ಸಾನಿಕ್ ಕ್ಷಿಪಣಿಯು ಸಿರ್ಸಾದಿಂದ ಉಡಾವಣೆಗೊಂಡು ಪಾಕಿಸ್ತಾನದ ಭೂಪ್ರದೇಶದ ಸುಮಾರು 124 ಕಿಮೀ ದೂರದಲ್ಲಿರುವ ಖನೇವಾಲ್ ಜಿಲ್ಲೆಯ ಮಿಯಾನ್ ಚನ್ನು ಬಳಿ ಬಿದ್ದಿತ್ತು ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಒಂದು ದಿನದ ನಂತರ ಭಾರತದ ಹೇಳಿಕೆ ಬಂದಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement