ಇನ್ನೊಂದು ವಾರದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ

ಕಾರವಾರ: ರಾಜ್ಯಾದ್ಯಂತ ಶಾಲೆಗಳಲ್ಲಿ ತುಂಬಲು 15 ಸಾವಿರ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಇನ್ನೊಂದು ವಾರದಲ್ಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದಲ್ಲಿ 1886ರಲ್ಲಿ ಆರಂಭವಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ನಾಡು ಮಾಸ್ಕೇರಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳು, ಶಿಕ್ಷಕರ ಜೊತೆಗೆ ಮಾತನಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೊಂದು ವಾರದಲ್ಲಿ ಶಿಕ್ಷಕರ ನೇಮಕಾತಿಗಾಗಿ ನೋಟಿಫಿಕೇಷನ್ ಹೊರಡಿಸಲಾಗುತ್ತದೆ. 15 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. 5 ಸಾವಿರ ಕಲ್ಯಾಣ ಕರ್ನಾಟಕಕ್ಕೆ ಹಾಗೂ 10 ಸಾವಿರ ಶಿಕ್ಷಕರನ್ನು ರಾಜ್ಯದ ಉಳಿದ ಭಾಗಕ್ಕೆ ನೇಮಕ ಮಾಡಲಾಗುತ್ತದೆ ಎಂದರು.

ಮುಂದಿನ ಶೈಕ್ಷಣಿಕ ವರ್ಷದಲ್ಲಿ 20 ಸಾವಿರ ಶಾಲೆಯಲ್ಲಿ ಅರ್ಲಿ ಚೈಲ್ಡ್ ಎಜುಕೇಷನ್ ಪರಿಚಯ ಮಾಡುತಿದ್ದೇವೆ ಎಂದು ಹೇಳಿದರು.
ಈ ಬಾರಿ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹೈಕೋರ್ಟ್ ಏನು ಆದೇಶ ಮಾಡುತ್ತದೋ ಅದನ್ನು ಪಾಲಿಸಲೇ ಬೇಕು. ಈ ಪರೀಕ್ಷೆಗೆ ಗೈರು ಹಾಜರಾದರೆ ಮತ್ತೆ ಪ್ರತ್ಯೇಕ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದರು.

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement