ಪಂಚರಾಜ್ಯ ಚುನಾವಣೆ ವೈಫಲ್ಯ: ಎಐಸಿಸಿ ಸಭೆ ಕರೆಯಲು ಜಿ-23 ಸದಸ್ಯರ ಒತ್ತಾಯ

ನವದೆಹಲಿ: ಪಂಚರಾಜ್ಯ ಚುನಾವಣೆ ಫಲಿತಾಂಶಗಳು ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಬೆಳವಣಿಕೆಗಳು ಮತ್ತೆ ಮುನ್ನೆಲೆಗೆ ಬಂದಿದೆ. ಈಗ ಎಐಸಿಸಿಗೆ ಹೊಸ ಅಧ್ಯಕ್ಷರ ನೇಮಕ ಯಾವಾಗ ಎಂಬ ಪ್ರಶ್ನೆಗೆ ಮತ್ತೆ ಮುನ್ನಲೆಗೆ ಬಂದಿದೆ.
ಐದು ರಾಜ್ಯಗಳಲ್ಲಿನ ಹೀನಾಯ ಸೋಲು ರಾಷ್ಟ್ರೀಯ ಪಕ್ಷ ಎನಿಸಿಕೊಂಡಿರುವ ಕಾಂಗ್ರೆಸ್ ವಲಯದ ನಾಯಕರ ನಿದ್ದೆ ಕೆಡಿಸಿದೆ.

ಅದರಲ್ಲೂ ಎಐಸಿಸಿ ನಾಯಕರ ಸಭೆ ಕರೆಯುವಂತೆ ಜಿ-23 ಸದಸ್ಯರು ಒತ್ತಾಯಿಸುತ್ತಿದ್ದಾರೆ. ‘ಜಿ 23’ ಅಥವಾ ಕಾಂಗ್ರೆಸ್ ವಲಯದಲ್ಲಿಯೇ ಗುರುತಿಸಿಕೊಂಡಿರುವ 23 ಭಿನ್ನಮತೀಯರ ಗುಂಪು ತುರ್ತು ಎಐಸಿಸಿ ಸಭೆಗೆ ಕರೆಯುವಂತೆ ಕೇಳಿಕೊಂಡಿದೆ. ಅಲ್ಲದೇ ಇತ್ತೀಚಿನ ಚುನಾವಣಾ ಸೋಲಿನ ಜವಾಬ್ದಾರಿ ಮತ್ತು ತಪ್ಪುಗಳನ್ನು ಸರಿಪಡಿಸಬೇಕಾಗಿದೆ ಎಂದು ಹೇಳಿದೆ.

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ಪಕ್ಷ ಎದುರಿಸಿದ ಮುಖಭಂಗದ ಹಿಂದಿನ ಕಾರಣವನ್ನು ಕಂಡುಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ತುರ್ತು ಎಐಸಿಸಿ ಸಭೆ ಕರೆಯುವಂತೆ ಜಿ-23 ಸದಸ್ಯರು ಒತ್ತಾಯಿಸಿದ್ದಾರೆ. ಆ ಮೂಲಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ರಚನೆ, ಇತ್ತೀಚಿನ ಚುನಾವಣಾ ಸೋಲಿನ ಹೊಣೆಗಾರಿಕೆ ಮತ್ತು ಸಾಂಸ್ಥಿಕ ಚುನಾವಣೆಗಳನ್ನು ಪೂರ್ಣಗೊಳಿಸುವುದರ ಬಗ್ಗೆ ಚರ್ಚೆ ನಡೆಸಬೇಕಿದೆ.
ಇದರ ಮಧ್ಯೆ ಕಾಂಗ್ರೆಸ್ ಸಂಸದ ಕಪಿಲ್ ಸಿಬಲ್ ಮತ್ತು ಮನೀಶ್ ತಿವಾರಿ ಶುಕ್ರವಾರ ರಾಜ್ಯಸಭೆಯ ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ ಸಭೆ ನಡೆಸಿದರು. ಮೂಲಗಳ ಪ್ರಕಾರ, ಅವರು ಪಕ್ಷದ ಕಳಪೆ ಪ್ರದರ್ಶನ ಮತ್ತು ಭವಿಷ್ಯದ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು.

ಪ್ರಮುಖ ಸುದ್ದಿ :-   'ಅಕ್ರಮ' ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ : ಮಹಾರಾಷ್ಟ್ರ ಸೈಬರ್ ಪೊಲೀಸರಿಂದ ನಟಿ ತಮನ್ನಾ ಭಾಟಿಯಾಗೆ ಸಮನ್ಸ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement