ಬ್ಯಾಂಕ್ ಕ್ಲರ್ಕ್​ನಿಂದಲೇ ಹಣ, ಕೆ.ಜಿ.ಗಟ್ಟಲೆ ಚಿನ್ನ ಕಳವು; ಮೂವರ ಬಂಧನ

ಬೆಳಗಾವಿ: ಸವದತ್ತಿ ತಾಲೂಕಿನ ಮುರಗೋಡ ಬಿಡಿಸಿಸಿ ಬ್ಯಾಂಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಜಿಲ್ಲಾ ಪೊಲೀಸರುಬಿಡಿಸಿಸಿ ಬ್ಯಾಂಕ್​ನಿಂದ ಕೋಟಿಗಟ್ಟಲೆ ನಗದು, ಕೆ.ಜಿ.ಗಟ್ಟಲೆ ಚಿನ್ನ ಕದ್ದೊಯ್ದಿದ್ದ ಮೂವರನ್ನು ವಾರದೊಳಗೆ ಪೊಲೀಸರು ಬಂಧಿಸಿದ್ದಾರೆ.
ಅವರಿಂದ 4.20 ಕೋಟಿ ರೂ. ನಗದು, 3 ಕೆಜಿ ಬಂಗಾರ ಆಭರಣಗಳನ್ನು ಜಪ್ತಿ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರಾಮದುರ್ಗ ತಾಲೂಕಿನ ತೋರನಗಟ್ಟಿ ಗ್ರಾಮದ ಹಾಗೂ ಮುರಗೋಡ ಡಿಸಿಸಿ ಬ್ಯಾಂಕ್ ಕ್ಲರ್ಕ್ ಬಸವರಾಜ ಹುಣಶಿಕಟ್ಟಿ (30), ಯರಗಟ್ಟಿ ಗ್ರಾಮದ ಸಂತೋಷ ಕಾಳಪ್ಪ ಕಂಬಾರ (31), ಸವದತ್ತಿ ತಾಲೂಕಿನ ಜೀವಾಪುರ ಗ್ರಾಮದ ಗಿರೀಶ ಲಕ್ಷ್ಮಣ ಬೆಳವಲ (26) ಬಂಧಿತ ಆರೋಪಿಗಳಾಗಿದ್ದಾರೆ.
ಬಿಡಿಸಿಸಿ ಬ್ಯಾಂಕ್ ಮುರಗೋಡ ಶಾಖೆಯ ಸ್ಟ್ರಾಂಗ್ ರೂಂ, ಲಾಕರ್‌ಗಳಿಗೆ ನಕಲಿ ಕೀಗಳನ್ನು ಬಳಸಿ 4,37,59,000 ರೂ. ನಗದು ಮತ್ತು 3 ಕೆ.ಜಿ. ತೂಕದ ಚಿನ್ನಾಭರಣ (1.63 ಲಕ್ಷ ರೂ. ಮೌಲ್ಯ) ಕಳವಾಗಿದೆ ಎಂದು ಎಂದು ಬ್ಯಾಂಕ್ ಮ್ಯಾನೇಜರ್ ಪ್ರಮೋದ ಯಲಿಗಾರ ಮಾ.6ರಂದು ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಎಸ್‌ಪಿ ಲಕ್ಷ್ಮಣ ನಿಂಬರಗಿ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು. ಪ್ರಕರಣದ ಬೆನ್ನುಬಿದ್ದ ತನಿಖಾ ತಂಡ ಆರಂಭದಲ್ಲಿ ಎಲ್ಲ ಬ್ಯಾಂಕ್ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಿ ಮಾಹಿತಿ ಪಡೆದುಕೊಂಡಿತ್ತು.
ಈ ಸಂದರ್ಭದಲ್ಲಿ ಅನುಮಾನಾಸ್ಪದ ರೀತಿಯಲ್ಲಿದ್ದ ಬ್ಯಾಂಕ್ ಕ್ಲರ್ಕ್ ಬಸವರಾಜ ಹುಣಶಿಕಟ್ಟಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಮೂವರು ಸೇರಿಕೊಂಡು ಕಳ್ಳತನ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಅಲ್ಲದೆ, ಕಳ್ಳತನ ಮಾಡಿರುವ ನಗದು, ಬಂಗಾರದ ಆಭರಣಗಳನ್ನು ಜಮೀನಿನಲ್ಲಿ ಮುಚ್ಚಿ ಹಾಕಿದ್ದರ ಬಗ್ಗೆ ಸಹ ಬಾಯ್ಬಿಟ್ಟಿದ್ದಾರೆ. ಕದ್ದ ವಸ್ತುಗಳನ್ನು ವಶಕ್ಕೆ ಪಡೆದು ಬ್ಯಾಂಕ್‌ಗೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಚುನಾವಣೆ ವೇಳೆಯೇ ಬಿಜೆಪಿಗೆ ಗುಡ್‌ಬೈ ಹೇಳಿದ ಸಂಸದ ಕರಡಿ ಸಂಗಣ್ಣ : ಕಾಂಗ್ರೆಸ್‌ ಸೇರ್ಪಡೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement