ಮೈಸೂರು ವಿವಿಯಿಂದ ಪುನೀತ ರಾಜಕುಮಾರಗೆ ಮರಣೋತ್ತರ ಗೌರವ ಡಾಕ್ಟರೇಟ್

ಮೈಸೂರು: ಕನ್ನಡದ ನಟ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.
ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಅಪ್ಪುಗೆ ಮರಣೋತ್ತರ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತಕುಮಾರ್ ಪ್ರಕಟಿಸಿದ್ದಾರೆ. ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿಶ್ವ ವಿದ್ಯಾಲಯದ 102ನೇ ಘಟಿಕೋತ್ಸವದಲ್ಲಿಗೌರವ ಡಾಕ್ಟರೇಟ್ ನೀಡುವುದಾಗಿ ತಿಳಿಸಿದ್ದಾರೆ.

ವಿಶೇಷವೆಂದರೆ 46 ವರ್ಷದ ಹಿಂದೆ ಡಾ.ರಾಜ​ಕುಮಾರ್ ಅವರಿಗೂ ಮೈಸೂರು ವಿವಿ ಗೌರವ ಡಾಕ್ಟರೇಟ್ ನೀಡಿತ್ತು.
ಪುನೀತ್ ರಾಜ್‌ಕುಮಾರ್‌ರೊಂದಿಗೆ ಒಟ್ಟು ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಿಸಲಾಗಿದೆ. ಹಿರಿಯ ವಿಜ್ಞಾನಿ ಡಾ. ವಿ.ಎಸ್. ಅತ್ರೆ ಹಾಗೂ ಜನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಅವರಿಗೂ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಮಾರ್ಚ್ 22ರಂದು ನಡೆಯಲಿರುವ ಘಟಿಕೋತ್ಸವದಂದು 28,581 ಅಭ್ಯರ್ಥಿಗಳಿಗೆ ಪದವಿ, 5,677 ಅಭ್ಯರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುತ್ತದೆ ಎಂದು ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತಕುಮಾರ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement