ಸಿಸಿಎಸ್ ಸಭೆ: ಉಕ್ರೇನ್‌ನಲ್ಲಿ ಹತ್ಯೆಗೀಡಾದ ಭಾರತೀಯ ವಿದ್ಯಾರ್ಥಿ ಮೃತದೇಹ ಮರಳಿ ತರಲು ಸರ್ವ ಪ್ರಯತ್ನಕ್ಕೆ ಪ್ರಧಾನಿ ಸೂಚನೆ

ನವದೆಹಲಿ: ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಸಂದರ್ಭದಲ್ಲಿ ಭಾರತದ ಭದ್ರತಾ ಸನ್ನದ್ಧತೆ ಮತ್ತು ಚಾಲ್ತಿಯಲ್ಲಿರುವ ಜಾಗತಿಕ ಸನ್ನಿವೇಶವನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಭದ್ರತಾ ಕ್ಯಾಬಿನೆಟ್ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಿದ್ದರು ಎಂದು ಅಧಿಕೃತ ಪ್ರಕಟಣೆ ಭಾನುವಾರ ತಿಳಿಸಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್, ಎನ್‌ಎಸ್‌ಎ ಅಜಿತ್ ದೋವಲ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರಧಾನಿ ಕಾರ್ಯಾಲಯದ ಬಿಡುಗಡೆಯ ಪ್ರಕಾರ, ಗಡಿ ಪ್ರದೇಶಗಳಲ್ಲಿ ಹಾಗೂ ಕಡಲ ಮತ್ತು ವಾಯು ಡೊಮೇನ್‌ನಲ್ಲಿ ಭಾರತದ ಭದ್ರತಾ ಸನ್ನದ್ಧತೆಯ ಇತ್ತೀಚಿನ ಬೆಳವಣಿಗೆಗಳು ಮತ್ತು ವಿವಿಧ ಅಂಶಗಳ ಕುರಿತು ಪ್ರಧಾನಿ ಮೋದಿ ಅವರಿಗೆ ವಿವರಿಸಲಾಗಿದೆ.

ಉಕ್ರೇನ್‌ನಿಂದ ಭಾರತದ ನೆರೆಯ ರಾಷ್ಟ್ರಗಳ ಕೆಲವು ನಾಗರಿಕರೊಂದಿಗೆ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಆಪರೇಷನ್ ಗಂಗಾ ಕಾರ್ಯಾಚರಣೆಯ ವಿವರಗಳನ್ನು ಒಳಗೊಂಡಂತೆ ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಪ್ರಧಾನ ಮಂತ್ರಿಗೆ ವಿವರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸಭೆಯಲ್ಲಿ, ಉಕ್ರೇನ್‌ನ ಖಾರ್ಕಿವ್‌ನಲ್ಲಿ ಮೃತಪಟ್ಟ ಕರ್ನಾಟಕದ ಹಾವೇರಿ ಜಿಲ್ಲೆಯ ನವೀನ್ ಶೇಖರಪ್ಪ ಅವರ ಪಾರ್ಥಿವ ಶರೀರವನ್ನು ಮರಳಿ ತರಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡಬೇಕು ಎಂದು ಪ್ರಧಾನಿ ಮೋದಿ ನಿರ್ದೇಶನ ನೀಡಿದರು.

ಪ್ರಮುಖ ಸುದ್ದಿ :-   ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಕ್ಕೆ ಮಾನ್ಸೂನ್‌ ಪ್ರವೇಶ ; ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement