ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಏರ್ ಇಂಡಿಯಾ ಅಧ್ಯಕ್ಷರಾಗಿ ನೇಮಕ

ನವದೆಹಲಿ: ಏರ್ ಇಂಡಿಯಾದ ಅಧ್ಯಕ್ಷರಾಗಿ ನಟರಾಜನ್ ಚಂದ್ರಶೇಖರನ ಅವರನ್ನು ಟಾಟಾ ಗ್ರೂಪ್ ನೇಮಕ ಮಾಡಿದೆ , ಅವರ ನೇಮಕಾತಿಯನ್ನು ಮಂಡಳಿಯು ಸೋಮವಾರ ಖಚಿತಪಡಿಸಿದೆ.
ಟಾಟಾ ಗ್ರೂಪ್ ಈ ಹಿಂದೆ ಟರ್ಕಿಯ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಎಂದು ಘೋಷಿಸಿತ್ತು, ಆದರೆ ಆ ನೇಮಕಾತಿಯು ಭಾರತದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.
ಇದರ ಪರಿಣಾಮವಾಗಿ, ಟಾಟಾದ ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಲು ಟರ್ಕಿಯ ಇಲ್ಕರ್ ಐಸಿ ನಿರಾಕರಿಸಿದ್ದರು. ಐಸಿ ಅವರು ಪಾಕಿಸ್ತಾನದ ಮಿತ್ರ ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರ ನಿಕಟವರ್ತಿ ಎಂದು ಪರಿಗಣಿಸಲಾಗಿದೆ, ಇದು ಅವರ ನೇಮಕಾತಿಯನ್ನು ಘೋಷಿಸಿದ ನಂತರ ವಿವಾದಕ್ಕೆ ಕಾರಣವಾಯಿತು

ಚಂದ್ರಶೇಖರನ್ ಟಾಟಾ ಸನ್ಸ್‌ನ ಅಧ್ಯಕ್ಷರಾಗಿದ್ದು, 100 ಕ್ಕೂ ಹೆಚ್ಚು ಟಾಟಾ ಆಪರೇಟಿಂಗ್ ಕಂಪನಿಗಳ ಪ್ರವರ್ತಕರು. ಅವರು ಅಕ್ಟೋಬರ್ 2016 ರಲ್ಲಿ ಟಾಟಾ ಸನ್ಸ್ ಮಂಡಳಿಗೆ ಸೇರಿದರು ಮತ್ತು ಜನವರಿ 2017 ರಲ್ಲಿ ಅಧ್ಯಕ್ಷರಾಗಿ ನೇಮಕಗೊಂಡರು.
ಇದಲ್ಲದೇ ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಟಾಟಾ ಪವರ್, ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಸೇರಿದಂತೆ ಹಲವಾರು ಗ್ರೂಪ್ ಆಪರೇಟಿಂಗ್ ಕಂಪನಿಗಳ ಮಂಡಳಿಗಳಿಗೆ ಅಧ್ಯಕ್ಷರಾಗಿದ್ದಾರೆ. 2009 ರಿಂದ 17ರವರೆಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು. ಚಂದ್ರಶೇಖರನ್ ಟಾಟಾ ಗ್ರೂಪ್‌ನ ಮುಖ್ಯಸ್ಥರಾದ ಮೊದಲ ಪಾರ್ಸಿಯೇತರ ಮತ್ತು ವೃತ್ತಿಪರ ಕಾರ್ಯನಿರ್ವಾಹಕರು ಎಂಬ ಖ್ಯಾತಿ ಗಳಿಸಿದ್ದಾರೆ.

ಪ್ರಮುಖ ಸುದ್ದಿ :-   ಪಾಕಿಸ್ತಾನದ ರಾಜತಾಂತ್ರಿಕ ಅಧಿಕಾರಿಯನ್ನು ಹೊರಹಾಕಿದ ಭಾರತ; 24 ಗಂಟೆಯೊಳಗೆ ದೇಶ ತೊರೆಯಲು ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement