ಧಾರವಾಡ ಜಿಲ್ಲೆಯಾದ್ಯಂತ ಮಾ.15 ರಿಂದ ಪ್ರತಿಬಂಧಕಾಜ್ಞೆ

posted in: ರಾಜ್ಯ | 0

ಧಾರವಾಡ: ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿದಂತೆ , ನಾಳೆ ಮಾರ್ಚ್ 15 ರಂದು ಉಚ್ಛನ್ಯಾಯಾಲಯದಿಂದ ಆದೇಶ ಹೊರಡುವ ಸಂಭವವಿದ್ದು , ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಾದ್ಯಂತ ( ಗ್ರಾಮೀಣ )ಮಾರ್ಚ್‌ 15ರ ಬೆಳಿಗ್ಗೆ 6:00 ಗಂಟೆಯಿಂದ ಮಾರ್ಚ್‌ 19ರಂದು ಬೆಳಿಗ್ಗೆ 6 ರ ವರೆಗೆ ಗಂಟೆಯವರೆಗೆ ಸಿ.ಆರ್.ಪಿ.ಸಿ 1973 ರ ಕಲಂ 144 ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಆದೇಶ ಹೊರಡಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಿಕೊಂಡು ಬರಲು ಈ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ. ಧಾರವಾಡ ಜಿಲ್ಲಾ ಗ್ರಾಮೀಣ ವ್ಯಾಪ್ತಿಯಲ್ಲಿ 05 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು , ಮೆರವಣಿಗೆ ಅಥವಾ ಸಭೆ ಸಮಾರಂಭ ನಡೆಸುವುದನ್ನು ನಿಷೇಧಿಸಿದೆ. ಶಸ್ತ್ರ , ಬಡಿಗೆ , ಭರ್ಚಿ , ಖಡ್ಗ , ಗದೆ , ಬಂದೂಕು , ಚೂರಿ , ಲಾಠಿ , ಡೊಗ್ಗ , ಚಾಕು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ತೆಗೆದುಕೊಂಡು ಹೋಗುವುದು ಮತ್ತು ತಿರುಗಾಡುವುದನ್ನು ಪ್ರತಿಬಂಧಿಸಲಾಗಿದೆ . ಕಲ್ಲುಗಳನ್ನು , ಕ್ಷಾರಪದಾರ್ಥ , ಪಟಾಕಿ ಇಲ್ಲವೇ ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಇತರ ಎಸೆಯುವಂತಹ ವಸ್ತುಗಳನ್ನು ತೆಗೆದುಕೊಂಡು ಹೋಗುವುದನ್ನು ಪ್ರತಿಬಂಧಿಸಲಾಗಿದೆ .

ಓದಿರಿ :-   ತಾಳಿ ಕಟ್ಟುವ ವೇಳೆ ಮದುವೆ ಬೇಡವೆಂದು ಹೈಡ್ರಾಮಾ ಮಾಡಿದ ವಧು...!

ಬಹಿರಂಗವಾಗಿ ಘೋಷಣೆ ಮಾಡುವುದು , ಪದ ಹಾಡುವುದು , ವಾದ್ಯ ಬಾರಿಸುವುದು , ವ್ಯಾಖ್ಯಾನ ಕೊಡುವುದು , ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ಪ್ರತಿಬಂಧಿಸಲಾಗಿದೆ . ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು , ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು , ಚಿಹ್ನೆಗಳು , ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕರ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ಪ್ರತಿಬಂಧಿಸಲಾಗಿದೆ . ಯಾವುದೇ ವ್ಯಕ್ತಿ ಸಾರ್ವಜನಿಕರಾಗಲಿ ಮಾರಕಾಸ್ತ್ರಗಳು , ಸ್ಫೋಟಕ ವಸ್ತುಗಳು , ವಿನಾಶಕಾರಿ ವಸ್ತುಗಳು ಹಾಗೂ ಇತರ ಆಕ್ಷೇಪಾರ್ಹ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಅಧಿಕಾರ ಇರುತ್ತದೆ . ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು . ಅಲ್ಲದೇ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಶವ ಸಂಸ್ಕಾರಕ್ಕೆ ಅಥವಾ ಮದುವೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ . ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರದಂತೆ ನಿಯಮಗಳನ್ನು ಪಾಲಿಸಬೇಕು.ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 18 ರ ಅಡಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

ಓದಿರಿ :-   ಮಳೆ ಅನಾಹುತ: ಸಚಿವರ ನೇತೃತ್ವದಲ್ಲಿ 8 ಕಾರ್ಯಪಡೆ ರಚನೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ