ನಾಳೆಯಿಂದ ಒಂದು ವಾರ ಬೆಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿ

ಬೆಂಗಳೂರು: ನಾಳೆ, ಮಂಗಳವಾರ ಬೆಳಿಗ್ಗೆ 10:30ಕ್ಕೆ ಕರ್ನಾಟಕ ಹೈಕೋರ್ಟ್ ನಿಂದ ಹಿಜಾಬ್ ಕುರಿತು ಅರ್ಜಿಯ ತೀರ್ಪು ಪ್ರಕಟಿಸಲಾಗುತ್ತಿದೆ.
ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಒಂದು ವಾರ ನಗರದಾದ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂತ್ ಆದೇಶ ಹೊರಡಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ 10:30ಕ್ಕೆ ಹೈಕೋರ್ಟ್ ನಿಂದ ಹಿಜಾಬ್ ವಿವಾದದ ಅರ್ಜಿಯ ಕುರಿತಂತೆ ತೀರ್ಪು ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲು, ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳ ಬಳಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ಸೂಚನೆ ನೀಡಲಾಗುತ್ತದೆ.
ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಬಳಿಕ ಕರ್ನಾಟಕದಾದ್ಯಂತ ಹಬ್ಬಿ ಇದೀಗ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಸದ್ದು ಮಾಡಿದೆ. ಹಿಜಾಬ್ ವಿವಾದ ಹಿನ್ನೆಲೆ ಹೈಕೋರ್ಟ್​ನಲ್ಲಿ 11 ದಿನಗಳ ಕಾಲ ಚರ್ಚೆ ನಡೆಸಿ ತೀರ್ಪು ಕಾಯ್ದಿರಿಸಲಾಗಿತ್ತು. ಮಂಗಳವಾರ ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರ ಬೀಳಲಿದೆ.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement