ರಾಜ್ಯದಲ್ಲಿನ ಜಾತಿ ಸೂಚಕ ಗ್ರಾಮಗಳ ಹೆಸರು ಬದಲಾವಣೆ: ಸಚಿವ ಆಶೋಕ

ಬೆಂಗಳೂರು: ರಾಜ್ಯದಲ್ಲಿರುವ ಜಾತಿ ಸೂಚಕ ಗ್ರಾಮಗಳ ಹೆಸರು ಬದಲಾಯಿಸುವ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಬಸವನಗೌಡ ತುರವಿಹಾಳ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿರುವ ತಾಂಡಾಗಳು, ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಸ್ತಾಪ ಇದ್ದು, ಈಗಾಗಲೇ 1441 ತಾಂಡಾ-ಹಟ್ಟಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಕಾಂಗ್ರೆಸ್ ಸದಸ್ಯ ರಮೇಶ್ ಕುಮಾರ್, ಕೆಲವು ಕಡೆಗಳಲ್ಲಿ ವಡ್ಡರಪಾಳ್ಯ, ಮಾದಿಗರಹಳ್ಳಿ ಎಂಬಂತ ಜಾತಿ ಸೂಚಕ ಹೆಸರುಗಳನ್ನು ಇಟ್ಟುಕೊಂಡಿದ್ದಾರೆ. ಈ ಹೆಸರುಗಳನ್ನು ತೆಗೆಯುವಂತೆ ಸೂಚಿಸಲು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಚಿವ ಅಶೋಕ, ” ಜಾತಿ ಸೂಚಕ ಹಳ್ಳಿಗಳ ಹೆಸರುಗಳನ್ನು ಬದಲಾಯಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಲಂಬಾಣಿ ತಾಂಡಾ, ಗೊಲ್ಲರಹಟ್ಟಿ, ವಡ್ಡರಹಟ್ಟಿ, ಕುರುಬರಹಟ್ಟಿ, ಹೀಗೆ  ಕ್ಯಾಂಪ್, ಕಾಲೋನಿ ಸೇರಿದಂತೆ ಇತರೆ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು. ಇದು ಬೇಗ ಮುಗಿಯುವ ಪ್ರಕ್ರಿಯೆಯಲ್ಲ. 8, 9 ತಿಂಗಳು ಬೇಕಾಗುತ್ತದೆ. ಆದರೆ ಜಾತಿ ಸೂಚಕ ಹೆಸರಿರುವ ಗ್ರಾಮಗಳ ಹೆಸರನ್ನು ರದ್ದುಪಡಿಸಲು ತಕ್ಷಣವೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement