ಸ್ಕ್ರ್ಯಾಪ್ ಅಂಗಡಿಯಲ್ಲಿ ಬೆಂಕಿ ಅನಾಹುತ: 4 ಸಾವು, 14 ಮಂದಿ ಗಾಯ

ಜಮ್ಮು: ಜಮ್ಮು ನಗರದಲ್ಲಿ ಸ್ಕ್ರ್ಯಾಪ್ ಅಂಗಡಿ ಮತ್ತು ಸುತ್ತಮುತ್ತಲಿನ ಗುಡಿಸಲೊಳಗೆ ಸೋಮವಾರ ಸಂಭವಿಸಿದ ಭಾರೀ ಬೆಂಕಿ ಅನಾಹುತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಕ್ರ್ಯಾಪ್ ಅಂಗಡಿಯಲ್ಲಿ ಸಂಜೆ ಬೆಂಕಿ ಕಾಣಿಸಿಕೊಂಡಿತು ಮತ್ತು ರೆಸಿಡೆನ್ಸಿ ರಸ್ತೆಯ ಸುತ್ತಮುತ್ತಲಿನ ಗುಡಿಸಲುಗಳಿಗೆ ಆವರಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಜಮ್ಮುವಿನ ಎಸ್‌ಎಸ್‌ಪಿ ಚಂದನ್‌ ಕೊಹ್ಲಿ, ಸೋಮವಾರ ಸಂಜೆ ರೆಸಿಡೆನ್ಸಿ ರಸ್ತೆಯಲ್ಲಿರುವ ಸ್ಕ್ರ್ಯಾಪ್‌ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವು ಗ್ಯಾಸ್ ಸಿಲಿಂಡರ್‌ಗಳು ಕೂಡ ಸ್ಫೋಟಗೊಂಡಿದ್ದರಿಂದ ಸುತ್ತಮುತ್ತಲಿನ ಗುಡಿಸಲುಗಳಿಗೆ ಬೆಂಕಿ ವ್ಯಾಪಿಸಿದೆ ಎಂದು ಹೇಳಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ.

ಪೊಲೀಸರು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಸ್ಥಳೀಯರು ಗಾಯಾಳುಗಳನ್ನು ರಕ್ಷಿಸಲು ಶ್ರಮಿಸಿದರು. ಈ ಅಗ್ನಿ ಅವಘಡದಲ್ಲಿ 4 ಮಂದಿ ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಪ್ರಕಟಿಸಿದ್ದಾರೆ. ತೀವ್ರವಾಗಿ ಗಾಯಗೊಂಡವರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ ತಲಾ 25 ಸಾವಿರ ರೂ.ಗಳನ್ನು ಪ್ರಕಟಿಸಲಾಗಿದೆ.

ಓದಿರಿ :-   ವಾರಾಣಸಿ ನ್ಯಾಯಾಲಯಕ್ಕೆ ಜ್ಞಾನವಾಪಿ ಮಸೀದಿ ಸಮೀಕ್ಷಾ ವರದಿ ಸಲ್ಲಿಕೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ